ನವದೆಹಲಿ: ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಟಲ್ ಕ್ಯಾಂಟೀನ್ ಗಳನ್ನು ಅರಂಭಿಸಲಾಗಿದೆ.
ಅಟಲ್ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ರೇಖಾ ಗುಪ್ತಾ ನಗರ ಪ್ರದೇಶದ ಬಡವರು, ಕಾರ್ಮಿಕರು ಸೇರಿದಂತೆ ಸೌಲಭ್ಯವಂಚಿತ ನಿವಾಸಿಗಳಿಗೆ ಕೈಗೆಟುಕುವ ದರದಲ್ಲಿ ಪೌಷ್ಟಿಕ ಆಹಾರ ಪೂರೈಸುವ ಯೋಜನೆಯ ಭಾಗವಾಗಿ ದೆಹಲಿ ನಗರದಲ್ಲಿ 25 ಅಟಲ್ ಕ್ಯಾಂಟೀನ್‌ಗಳನ್ನು ಆರಂಭಿಸಲಾಗಿದೆ ಎಂದರು.
ದೆಹಲಿಯ ಯಾವುದೇ ವ್ಯಕ್ತಿ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಅಟಲ್ ಕ್ಯಾಂಟೀನ್ ನಲ್ಲಿ ಪ್ರತಿದಿನ ರೂ.5ಕ್ಕೆ ಪೌಷ್ಟಿಕ ಆಹಾರ ದೊರೆಯಲಿದೆ. ಈ ಯೋಜನೆಯು ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆದರ್ಶಗಳಿಗೆ ಅನುಗುಣವಾಗಿದೆ ಎಂದು ತಿಳಿಸಿದರು.
ಒಟ್ಟು 100 ಅಟಲ್ ಕ್ಯಾಂಟೀನ್ ಗಳನ್ನು ಆರಂಭಿಸುವ ಉದ್ದೇಶವಿದ್ದು, ಪ್ರತಿ ಕ್ಯಾಂಟೀನ್‌ನಲ್ಲಿ ದಿನಕ್ಕೆ 1,000 ಮಂದಿಗೆ ಊಟ ಸಿಗಲಿದೆ ಎಂದರು.