2026-06-08 01:22:50

Attack during Hindu Sangam program promotion | ಹಿಂದೂ ಸಂಗಮ ಕಾರ್ಯಕ್ರಮ ಪ್ರಚಾರ ವೇಳೆ ಹಲ್ಲೆ ನಾಲ್ವರ ಬಂಧನ ಯಾರಿವರು | Speed News Kannada

Attack during Hindu Sangam program promotion | ಹಿಂದೂ ಸಂಗಮ ಕಾರ್ಯಕ್ರಮ ಪ್ರಚಾರ ವೇಳೆ ಹಲ್ಲೆ ನಾಲ್ವರ ಬಂಧನ ಯಾರಿವರು | Speed News Kannada

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಇಂದು ನಡೆಯುತ್ತಿರುವ ಹಿಂದೂ ಸಂಗಮ ಕಾರ್ಯಕ್ರಮ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕ್, ಸುಹೆಲ್, ನಾಭಿ, ರಶೀದ್ ಬಂಧಿತರು.
ನಾಪೋಕ್ಲು ಪಟ್ಟಣದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಕುರಿತು ಹಿಂದೂ ಯುವಕರು ವಾಹನದಲ್ಲಿ ಸೌಂಡ್ ಬಾಕ್ಸ್ ಕಟ್ಟಿಕೊಂಡು ಪ್ರಚಾರ ಮಾಡುತ್ತಿದ್ದರು ಈ ವೇಳೆ ಕೆಲ ಮುಸ್ಲಿಂ ಯುವಕರು ಈ ಭಾಗದಲ್ಲಿ ಏಕೆ ಪ್ರಚಾರ ಮಾಡುತ್ತಿದ್ದೀರಾ ಎಂದು ತಗಾದೆ ತೆಗೆದಿದ್ದಾರೆ. ಮಾತಿನ ಚಕಮಕಿ ವಿಕೋಪಕ್ಕೆ ಹೋಗಿ, ಇವರು ಗೌತಮ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗೌತಮ್‌ನನನು ಕೂಡಲೇ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೊಡಗು ಎಸ್‌ ಪಿ ಬಿಂದು ಮಣಿ ಮಾಹಿತಿ ನೀಡಿದ್ದಾರೆ.
ಈ ಹಲ್ಲೆ ಪ್ರಕರಣದಲ್ಲಿ ನಾಪೋಕ್ಲು ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಹಿಂದೂ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. 
ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ ಬೋಪಯ್ಯ ತಕ್ಷಣವೇ ನಾಪೋಕ್ಲು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಪಡಿಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.