2026-06-25 03:53:48

Attempt to commit suicide by jumping into Tungabhadra river | ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ ಪ್ರೇಮಿಗಳ ರಕ್ಷಣೆ | Speed News Kannada

Attempt to commit suicide by jumping into Tungabhadra river | ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ ಪ್ರೇಮಿಗಳ ರಕ್ಷಣೆ | Speed News Kannada

ದಾವಣಗೆರೆ: ಪ್ರೇಮಿಗಳಿಬ್ಬರು ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.
ದಾವಣಗೆರೆ ಮೂಲದ ಪ್ರೇಮಿಗಳು, ತುಂಗಭದ್ರಾನದಿ ಸೇತುವೆ ಮೇಲಿಂದ ನದಿಗೆ ಜಿಗಿದಿದ್ದಾರೆ. ಇದನ್ನು ಕಂಡ ಶಳೀಯರು ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಪ್ರೇಮಿಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದುದರಿಂದ ಜೀವಕ್ಕೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಮನೆಯಲ್ಲಿ ಮದುವೆಗೆ ಒಪ್ಪಿಲ್ಲ ಎಂಬ ಕಾರಣಕ್ಕೆ ಪ್ರೇಮಿಗಳು ಆತ್ಮಹತ್ಯೆಗೆ ನಿರ್ಧರಿಸಿ ನದಿಗೆ ಹಾರಿದ್ದಾರೆ. ಕೆಲ ದಿನಗಳ ಹಿಂದೆಯೇ ಇಬ್ಬರು ಮನೆ ಬಿಟ್ಟು ಬಂದಿದ್ದರು ಎಂದು ತಿಳಿದುಬಂದಿದೆ. ಸದ್ಯ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.