2026-07-06 11:13:21

Attempted Murder Case of Youth Congress leader Abbas | ಯುವ ಕಾಂಗ್ರೆಸ್ ನಾಯಕ ಅಬ್ಬಾಸ್ ಕೊ*ಲೆ ಯತ್ನ ಕೇಸ್, ಪ್ರಮುಖ ಆರೋಪಿ ಅಂದರ್ | SNK

Attempted Murder Case of Youth Congress leader Abbas | ಯುವ ಕಾಂಗ್ರೆಸ್ ನಾಯಕ ಅಬ್ಬಾಸ್ ಕೊ*ಲೆ ಯತ್ನ ಕೇಸ್, ಪ್ರಮುಖ ಆರೋಪಿ ಅಂದರ್ | SNK

ಬೆಂಗಳೂರು : ನಗರದ ಸಿಸಿಬಿ ಪೊಲೀಸರು ನಡೆಸಿದ ಸಕಾಲಿಕ ಕಾರ್ಯಾಚರಣೆಯಿಂದಾಗಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್  ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಬ್ಬಾಸ್ ಕೊಲೆ ಯತ್ನದ ಯೋಜನೆಯನ್ನು ಯಶಸ್ವಿಯಾಗಿ ಹತ್ತಿಕ್ಕಿರುವ ಅಧಿಕಾರಿಗಳು, ಪ್ರಮುಖ ಸೂತ್ರಧಾರಿ ಹರ್ಷ ಸೇರಿದಂತೆ ಎಂಟು ಜನರನ್ನು ಈಗಾಗಲೇ ವಶಕ್ಕೆ ಪಡೆದಿದ್ದಾರೆ.  ಸದ್ಯ ತಲೆಮರೆಸಿಕೊಂಡಿರುವ ಇತರರಿಗಾಗಿ ಹುಡುಕಾಟ ತೀವ್ರಗೊಂಡಿದೆ.

ಕಳೆದ ವರ್ಷ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್ ಹೈದರ್ ಅಲಿ ಎಂಬಾತನ ಹತ್ಯೆಗೆ ಮುಯ್ಯಿ ತೀರಿಸಿಕೊಳ್ಳಲು ಈ ಸ್ಕೆಚ್ ಹಾಕಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಕೊಲೆಯಾದ ಹೈದರ್ ಅಲಿಯ ಸಹೋದರ ಶಬ್ಬೀರ್ ಅಲಿಯಾಸ್ ಶಕೀಲ್ ಮತ್ತು ಆತನ ಸಹಚರರು ಸೇರಿಕೊಂಡು ಅಬ್ಬಾಸ್ ಅವರನ್ನು ಮುಗಿಸಲು ಹೊಂಚು ಹಾಕಿದ್ದರು ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ.

ಹೀಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿಗಳು, ಅಬ್ಬಾಸ್ ಅವರ ಮೇಲೆ ದಾಳಿ ಮಾಡಲು ಸಜ್ಜಾಗಿದ್ದ ಜಾಲವನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಬಂಧಿತರಿಂದ ಸುಮಾರು ೩೦ ಮಾರಕಾಸ್ತ್ರಗಳು, ಒಂದು ಕಾರು ಮತ್ತು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ. ಇದರ ಹಿಂದೆ ದೊಡ್ಡ ಭೂಗತ ಲೋಕದ ಜಾಲವಿರುವ ಸಾಧ್ಯತೆಯಿದ್ದು, ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.