2026-06-02 12:23:04

ನನ್ನದು ಎನ್ನಲಾದ ಆಡಿಯೋ ನಕಲಿ; ತನಿಖೆಯಾಗಲಿ:ಜಮೀರ್‌ ಅಹ್ಮದ್‌ |Speed News Kannada

ನನ್ನದು ಎನ್ನಲಾದ ಆಡಿಯೋ ನಕಲಿ; ತನಿಖೆಯಾಗಲಿ:ಜಮೀರ್‌ ಅಹ್ಮದ್‌ |Speed News Kannada

ಬೆಂಗಳೂರು: ನನ್ನದು ಎನ್ನಲಾದ ಆಡಿಯೋ ನಕಲಿಯಾಗಿದ್ದು, ಎಐ ತಂತ್ರಜ್ಞಾನ ಬಳಸಿ ನಕಲು ಮಾಡಲಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಜಮೀರ್ ಅಹಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿರುವ ಆಡಿಯೋ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವ್ನನೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ನಡೆಸಲಿ ಎಂದು ಜಮೀರ್‌ ಸವಾಲು ಹಾಕಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.