2026-04-23 10:59:07

Auto gas chaos across Karnataka | ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ | Speed news kannada

Auto gas chaos across Karnataka | ಕರ್ನಾಟಕದಾದ್ಯಂತ ಆಟೋ ಗ್ಯಾಸ್ ಹಾಹಾಕಾರ | Speed news kannada

ಕರ್ನಾಟಕದಾದ್ಯಂತ ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಅಭಾವ ಹೆಚ್ಚಾಗುತ್ತಾ ಇದೆ. ಗೃಹ ಬಳಕೆಯ ಎಲ್​ಪಿಜಿ ಕೊರತೆ ಒಂದೆಡೆಯಾದರೆ ಇದೀಗ ಆಟೋ ಗ್ಯಾಸ್ ಜನರನ್ನು ಮತ್ತಷ್ಟು ಸಮಸ್ಯೆ ಕಾರಣವಾಗಿದೆ. ಗ್ಯಾಸ್ ಸಿಗದೆ ಆಟೋ ಚಾಲಕರು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದ್ದು, ಹಗಲಿಡೀ ಬಂಕ್‌ಗಳ ಮುಂದೆ ಕಾದು ಕುಳಿತು ಕಣ್ಣೀರಿಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ಯಾಸ್ ಅಭಾವದಿಂದಾಗಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಆಟೋ ಚಾಲಕರು ಗ್ಯಾಸ್‌ಗಾಗಿ ಮುಂಜಾನೆ 4-6 ಗಂಟೆಗೆ ಕ್ಯೂ ನಲ್ಲಿ ನಿಂತು ಕಾಯುತ್ತಿದ್ದಾರೆ. ಕೆಲವೆಡೆ ಗ್ಯಾಸ್‌ ಸಿಗದೆ ಬಂಕ್‌ ಗಳಲ್ಲಿ ನೋ ಸ್ಟಾಕ್‌ ಬೋರ್ಡ್‌ ಗಳನ್ನು ಹಾಕಿದ್ಧಾರೆ. ಬೆಂಗಳೂರಿನ ಕೆಲವೊಂದು ಬಂಕ್‌ಗಳಲ್ಲಿ ಪೂರ್ವ ಪ್ರಮಾಣದ ಗ್ಯಾಸ್‌ ನೀಡದೆ 400 ರೂ ಗ್ಯಾಸ್‌ ನೀಡಲಾಗುತ್ತಿದೆ. ಇನ್ನೂ ಆಟೋ ಚಾಲಕರು ಗ್ಯಾಸ್ ಇಲ್ಲದೇ ಬದುಕು ಹೇಗೆ ನಡೆಸುವುದು ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.