2026-05-02 11:47:14

B.L. Santosh meets BSY | ರಾಜಕೀಯದಲ್ಲಿ 5 ದಶಕ ಬಿಎಸ್‌ವೈ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಬಿ ಎಲ್ ಸಂತೋಷ್ | Speed News Kannada

B.L. Santosh meets BSY | ರಾಜಕೀಯದಲ್ಲಿ 5 ದಶಕ ಬಿಎಸ್‌ವೈ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಬಿ ಎಲ್ ಸಂತೋಷ್ | Speed News Kannada

ಬೆಂಗಳೂರು: ರಾಜಕಾರಣದಲ್ಲಿ ಐದು ದಶಕ ಪೂರೈಸಿದ ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಪಕ್ಷದ  ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಇಂದು ಭೇಟಿ ನೀಡಿದ್ದರು. ಈ ಸಮಯದಲ್ಲಿ ಸಂತೋಷ್‌ ಅವರು ಭೇಟಿ ನೀಡಿ, ಅವರ ಜತೆಗೆ ಉಪಾಹಾರ ಸೇವಿಸಿದರು.
ಇಬ್ಬರ ಭೇಟಿ ಕುರಿತು ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಸಂಘಟಿಸುತ್ತಿರುವ ಸಂತೋಷ್‌ ಅವರು ನನ್ನ ನಿವಾಸಕ್ಕೆ ಭೇಟಿ ನೀಡಿದ್ದು ಖುಷಿ ತಂದಿದೆ. ಅವರ ಸಂಘಟನಾ ಸಾಮರ್ಥ್ಯ ಚತುರತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಪ್ರೇರೇಪಣೆ ನೀಡುತ್ತದೆ. ಇದೇ ಸಂದರ್ಭದಲ್ಲಿ ಅವರು ನನ್ನ ರಾಜಕೀಯ ಜೀವನದ 50ನೇ ವರ್ಷದ ಪಯಣಕ್ಕೆ ಶುಭ ಕೋರಿದರು ಎಂದರು.
ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಕುರಿತು ಚರ್ಚೆ ನಡಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸದೃಢವಾಗಿದ್ದು, ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಯಿತು ಎಂದು ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮೇ 9ರಂದು ಬಿಜೆಪಿ 'ಯಡಿಯೂರಪ್ಪ ಅಭಿಮಾನೋತ್ಸವ' ಸಮಾವೇಶ ನಡೆಯಲಿದೆ. ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.  ಸುಮಾರು 10 ಲಕ್ಷ ಜನತೆ ಸೇರುವ ನಿರೀಕ್ಷೆ ಇದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.