2026-03-07 08:12:49

B Y Vijayendra inspires Kannadigas in Dubai | ದುಬೈನಲ್ಲಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಬಿ ವೈ ವಿಜಯೇಂದ್ರ | Speed News Kannada

B Y Vijayendra inspires Kannadigas in Dubai | ದುಬೈನಲ್ಲಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಬಿ ವೈ ವಿಜಯೇಂದ್ರ | Speed News Kannada

ಬೆಂಗಳೂರು: ಅಮೆರಿಕ, ಇಸ್ರೇಲ್ - ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ  ದುಬೈಯಲ್ಲಿ ಸಿಲುಕಿ ಆತಂಕದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ಮಾತನಾಡಿ ಅವರಿಗೆ ಧೈರ್ಯ ತುಂಬಿದರು.
ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ  ಸರಕಾರದ ಜೊತೆ ಮಾತನಾಡುತ್ತೇನೆಂದು ಅವರು ಭರವಸೆ ನೀಡಿದರು. ಪ್ರಶಸ್ತಿ ಪಡೆಯಲೆಂದು ಒಟ್ಟು 61 ಜನರ ತಂಡವು ತೆರಳಿದ್ದು, ದುಬೈಯಲ್ಲಿ ವಾಸ್ತವ್ಯ ಇರುವುದಾಗಿ ತಂಡದವರು ನುಡಿದರು.
ಅರಸೀಕೆರೆಯ 5 ಜನರೂ ಇವರ ಜೊತೆಗೆ ಇರುವುದಾಗಿ ಹಾಗೂ ಹೋಟೆಲ್ ಒಂದರಲ್ಲಿ ತಂಗಿರುವುದಾಗಿ ಅವರು ಆತಂಕವನ್ನು ಹಂಚಿಕೊಂಡರು. ಇದೀಗ 7ನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವೂ ರದ್ದಾಗಿದೆ ಎಂದು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇದರ ಸಂಬಂಧ ಆದ್ಯ ಗಮನ ಕೊಟ್ಟಿದ್ದಾರೆ. ಹಿಂದೆ ಉಕ್ರೇನ್‍ನಲ್ಲಿ ಇಂಥ ಸಮಸ್ಯೆ ಆದಾಗ ಕೇಂದ್ರ ಸರಕಾರವು ಅದನ್ನು ಬಗೆಹರಿಸಿತ್ತು. ಅಲ್ಲಿ ಸಿಲುಕಿದ್ದವರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು. ಈ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯ ಸಂಬಂಧಿತರ ಜೊತೆ ನಾನು ಕೂಡ ಮಾತನಾಡುವೆ ಎಂದು ವಿಜಯೇಂದ್ರ ಅವರು ಧೈರ್ಯ ತುಂಬಿದರು. ತಂಡವು ಸುರಕ್ಷಿತವಾಗಿ ವಾಪಸ್ ಬರಲು ಕ್ರಮ ಕೈಗೊಳ್ಳುವಂತೆ ಕೋರುವುದಾಗಿ ತಿಳಿಸಿದರು. ಆತಂಕಗೊಳ್ಳದಿರಿ; ನೀವೆಲ್ಲರೂ ಸುರಕ್ಷಿತವಾಗಿ ವಾಪಸ್ ಬರಲು ಕ್ರಮ ಕೈಗೊಳ್ಳಲು ಕೋರಲಿದ್ದೇನೆ ಎಂದು ಧೈರ್ಯ ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.