2026-06-08 01:29:18

Bagalkot stone pelting case | ಬಾಗಲಕೋಟೆ ಕಲ್ಲುತೂರಾಟ ಪ್ರಕರಣ ಪುಂಡರಿಗೆ ತಕ್ಕ ಶಿಕ್ಷೆ ಸಿಎಂ ಸಿದ್ದರಾಮಯ್ಯ ಭರವಸೆ | Speed News Kannada

Bagalkot stone pelting case | ಬಾಗಲಕೋಟೆ ಕಲ್ಲುತೂರಾಟ ಪ್ರಕರಣ ಪುಂಡರಿಗೆ ತಕ್ಕ ಶಿಕ್ಷೆ ಸಿಎಂ ಸಿದ್ದರಾಮಯ್ಯ ಭರವಸೆ | Speed News Kannada

ಬೆಂಗಳೂರು: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ. ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 
ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ.
ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ‌ ಮೊದಲ ಆದ್ಯತೆ. ಜನರ ಶಾಂತಿ - ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ - ಶಕ್ತಿಗಳನ್ನು ನಾವು ಸಹಿಸುವುದಿಲ್ಲ. ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಿ. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.