2026-06-08 01:24:47

Balanja school principal suspended | ಟಿಪ್ಪರ್ ನಲ್ಲಿ ಮಕ್ಕಳ ಪ್ರವಾಸ ಆಯೋಜಿಸಿದ್ದ ಬಳಂಜ ಶಾಲೆಯ ಮುಖ್ಯೋಪಾಧ್ಯಾಯ ಅಮಾನತು | Speed News Kannada

Balanja school principal suspended | ಟಿಪ್ಪರ್ ನಲ್ಲಿ ಮಕ್ಕಳ ಪ್ರವಾಸ ಆಯೋಜಿಸಿದ್ದ ಬಳಂಜ ಶಾಲೆಯ ಮುಖ್ಯೋಪಾಧ್ಯಾಯ ಅಮಾನತು | Speed News Kannada

ಬೆಳ್ತಂಗಡಿ: ಅಧ್ಯಯನ ಪ್ರವಾಸದ ಹೆಸರಿನಲ್ಲಿ ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಕರೆದುಕೊಂಡು ಹೋಗಿದ್ದ ಬಳಂಜ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಅಮಾನತು ಮಾಡಲಾಗಿದೆ. 

ಟಿಪ್ಪರ್ ನಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ  ಶಿಕ್ಷಣ ಇಲಾಖೆ ಕಿರಣ್ ಎಂಬವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.
ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಬಾರಿ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಸರಕು ಸಾಗಾಣಿಕೆ ವಾಹನಗಳಾದ, ಪಿಕಪ್ ವಾಹನ ಮತ್ತು  ಟಿಪ್ಪರ್  ಅನ್ನು ಬಾಡಿಗೆಗೆ ಪಡೆಯಲಾಗಿತ್ತು. ಅಧ್ಯಯನ ಪ್ರವಾಸದ ಹೆಸರಿನಲ್ಲಿ ಮಕ್ಕಳನ್ನು ಸರಕು ಸಾಗಾಣೆ ವಾಹನದಲ್ಲಿ ಕರೆದುಕೊಂಡು ಹೋಗಿದ್ದ ವಿಡಿಯೋ ಎಲ್ಲೆಡೆ ವೈರಲ್ ಅಗಿತ್ತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.