2026-03-07 06:35:03

Ban on mobile phone use in schools | ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆ ನಡೆಯುತ್ತಿದೆ ಡಿ ಕೆ ಶಿವಕುಮಾರ್ | Speed News Kannada

Ban on mobile phone use in schools | ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆ ನಡೆಯುತ್ತಿದೆ ಡಿ ಕೆ ಶಿವಕುಮಾರ್ | Speed News Kannada

ಬೆಂಗಳೂರು: ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಸರ್ಕಾರ ಮಟ್ಟದಲ್ಲಿ ಚರ್ಚೆಯಲ್ಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಮೊಬೈಲ್‌ ನಿಷೇಧಿಸುವಂತೆ  ಪೋಷಕರೂ ಮನವಿ ಸಲ್ಲಿಸಿದ್ದಾರೆ. ಜಗತ್ತಿನ ಅನೇಕ ದೇಶಗಳಲ್ಲಿ ಈಗಾಗಲೇ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂದು ಹೇಳಿದರು.
ಅಂತರರಾಷ್ಟ್ರೀಯ ಮಟ್ಟದಲ್ಲೂಈ ವಿಷಯ ಚರ್ಚೆಯಾಗುತ್ತಿದೆ. ನಮ್ಮ ಒಡೆತನದ ಶಾಲೆಗಳಲ್ಲಿ ಮೊಬೈಲ್ ನಿಷೇಧ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಆದ್ದರಿಂದ ಮೊಬೈಲ್‌ ಬಳಕೆ ನಿಷೇಧಿಸಲು ಚಿಂತನೆ ನಡೆದಿದೆ ಎಂದರು.
‘ವಿಬಿ ಜಿ ರಾಮ್ ಜಿ’ ಕಾಯ್ದೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ‘ಈ ವಿಚಾರವಾಗಿ ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ಸ್ಪಷ್ಟನೆ ನೀಡಿಲ್ಲ. ನಿರ್ದೇಶನವನ್ನೂ ನೀಡಿಲ್ಲ. ಈ ಹಿಂದೆ ಕೂಲಿ ಮಾಡಿದವರಿಗೂ ಹಣ ಬಿಡುಗಡೆ ಮಾಡಿಲ್ಲ. ಕಾಯ್ದೆಯನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಕೂಲಿ ಕಾರ್ಮಿಕರು, ಬಡವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.