2026-07-23 12:23:10

Bangalore Municipal Corporation elections deadline extended to September 30 | ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸೆಪ್ಟೆಂಬರ್ 30ರವರೆಗೆ ಗಡುವು | Speed news kannada

Bangalore Municipal Corporation elections deadline extended to September 30 | ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸೆಪ್ಟೆಂಬರ್ 30ರವರೆಗೆ ಗಡುವು | Speed news kannada

ಬೆಂಗಳೂರು ನಗರ ಪಾಲಿಕೆ ಚುನಾವಣೆಯ ಕುರಿತಾಗಿ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯನ್ನು ಜೂನ್ 30ರೊಳಗೆ ನಡೆಸುವ ಬದಲು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲು ಮನವಿ ಮಾಡಿದೆ.ಸಿಬ್ಬಂದಿ ಮತ್ತು ಹಣದ ಕೊರತೆ, ಜೊತೆಗೆ ಜನಗಣತಿ ಕಾರ್ಯಗಳಲ್ಲಿ ಅಧಿಕಾರಿಗಳು ನಿರತರಾಗಿರುವುದರಿಂದ ಗಡುವಿನೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ ಎಂದು ಆಯೋಗ ತಿಳಿಸಿದೆ. ಮತದಾರರ ಪಟ್ಟಿಯ ವಿಶೇಷ ತಿದ್ದುಪಡಿ ಪ್ರಕ್ರಿಯೆಯೂ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.ಈ ಹಿನ್ನೆಲೆ, ತಕ್ಷಣ ಅಗತ್ಯ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ಮುಂದೆ ಆಯೋಗ ಮನವಿ ಮಾಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.