2026-03-07 07:24:13

Bank manager escapes after collecting crores of rupees | ಎಫ್ಟಿ ಮೇಲೆ ಸಾಲ ಕೊಡಿಸೋದಾಗಿ ಹೇಳಿ ವಂಚನೆ ಕೋಟಿ ಕೋಟಿ ಹಣ ಸಂಗ್ರಹಿಸಿ ಬ್ಯಾಂಕ್‌ ಮ್ಯಾನೇಜರ್ ಎಸ್ಕೆಪ್ | Speed News Kannada

Bank manager escapes after collecting crores of rupees | ಎಫ್ಟಿ ಮೇಲೆ ಸಾಲ ಕೊಡಿಸೋದಾಗಿ ಹೇಳಿ ವಂಚನೆ ಕೋಟಿ ಕೋಟಿ ಹಣ ಸಂಗ್ರಹಿಸಿ ಬ್ಯಾಂಕ್‌ ಮ್ಯಾನೇಜರ್ ಎಸ್ಕೆಪ್ | Speed News Kannada

ಹಾಸನ, ಫೆಬ್ರವರಿ 28: ನಿಗದಿತ ಠೇವಣಿ ಮೇಲೆ ಸಾಲ ಕೊಡಿಸೋದಾಗಿ ಹೇಳಿ 50ಕ್ಕೂ ಅಧಿಕ ಗ್ರಾಹಕರಿಂದ 3 ಕೋಟಿಗೂ ಹೆಚ್ಚು ಹಣ ಸಂಗ್ರಹ ಮಾಡಿ ವಂಚಿಸಿರುವ ಆರೋಪ ಹಾಸನದ ಖಾಸಗಿ ಬ್ಯಾಂಕ್ ವಿರುದ್ಧ ಕೇಳಿ ಬಂದಿದೆ. ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದ್ದು, ಬ್ಯಾಂಕ್ ಮ್ಯಾನೇಜರ್ ಹೆಚ್.ಎಸ್.ಪೂಜಾ ವಿರುದ್ಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶುಭಾನ್ವಿತಾಗೆ ದೂರು ನೀಡಲಾಗಿದೆ. ಎಫ್‌ಡಿ ಇಡುವಂತೆ ಹೇಳಿ ಕೋಟ್ಯಂತರ ಹಣ ಸಮೇತ ಮ್ಯಾನೇಜರ್ ನಾಪತ್ತೆಯಾಗಿರೋದಾಗಿ ಆರೋಪಿಸಲಾಗಿದೆ.

'ಎಫ್ಟಿ ಮಾಡಿದ ಹಣಕ್ಕೆ ದಾಖಲೆ ನೀಡಿಲ್ಲ'
ಬ್ಯಾಂಕ್‌ನಲ್ಲಿ ಎಫ್ಟಿ ಇಟ್ಟರೆ 25 ಲಕ್ಷದಿಂದ 1 ಕೋಟಿವರೆಗೂ ಸಾಲ ಕೊಡಿಸುವ ಆಮಿಷವನ್ನು ಗ್ರಾಹಕರಿಗೆ ಬ್ಯಾಂಕ್ ಮ್ಯಾನೇಜರ್ ಹೆಚ್.ಎಸ್.ಪೂಜಾ ಒಡ್ಡಿದ್ದರು. ಜೊತೆಗೆ 25 ಲಕ್ಷ ಲೋನ್‌ಗೆ 10 ಲಕ್ಷ ಸಬ್ಸಿಡಿ ಎಂದು ನಂಬಿಸಿ ಜನರಿಂದ ಹಣ ಸಂಗ್ರಹ ಮಾಡಿದ್ದರು. ಇವರ ಮಾತು ನಂಬಿ ಬ್ಯಾಂಕ್‌ನಲ್ಲಿ ಜನ ಹಣ ಇಟ್ಟಿದ್ದು, ಎಫ್‌ಡಿ ಮಾಡಿರುವ ಹಣಕ್ಕೆ ಯಾವುದೇ ದಾಖಲೆಯನ್ನು ಮ್ಯಾನೇಜರ್ ನೀಡದ ಆರೋಪವೂ ಕೇಳಿಬಂದಿದೆ. ಗ್ರಾಹಕರು ಹಣ ವಾಪಸ್ ಕೇಳಿದ್ದಕ್ಕೆ ಕೆಲವರಿಗೆ ಚೆಕ್ ನೀಡಿ ಪೂಜಾ ಎಸ್ಕೆಪ್ ಆಗಿದ್ದಾರೆ ಎನ್ನಲಾಗಿದೆ. ಹಾಸನದ ಪೆನ್ನನ್ ಮೊಹಲ್ಲಾ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

ವಿದೇಶಕ್ಕೆ ಪರಾರಿಯಾಗಲು ಆರೋಪಿ ಯತ್ನ?
ಇನ್ನು ಹಣ ಸಂಗ್ರಹದ ಬಳಿಕ ಆರೋಪಿ ಹೆಚ್.ಎಸ್.ಪೂಜಾ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ದುಬೈಗೆ ಹಾರಲು ಅವರು ವಿಮಾನ ನಿಲ್ದಾಣದಲ್ಲಿ ಓಡಾಡುತ್ತಿರುವ ಮಾಹಿತಿ ಇದ್ದು, ಅವರು ಪರಾರಿಯಾಗಲು ಯಾವುದೇ ಕಾರಣಕ್ಕೂ ಬಿಡಬಾರದು. ಅವರ ಪಾಸ್‌ಪೋರ್ಟ್ ರದ್ದು ಮಾಡಿ ವಿದೇಶ ಪ್ರಯಾಣವನ್ನು ತಡೆಯಬೇಕು. ಸಾಲ ಕೊಡಿಸುವ ಆಮಿಷವೊಡ್ಡಿ ಗ್ರಾಹಕರನ್ನು ವಂಚಿಸಿರುವ ಆಕೆಯನ್ನು ಬಂಧಿಸಿ, ತಮಗೆ ನ್ಯಾಯ ಕೊಡಿಸಬೇಕು ಎಂದು ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಗ್ರಾಹಕರು ಎಸ್ಪಿಗೆ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.