2026-04-23 10:55:19

Barber shop owner beaten up by miscreants|ಬಾರ್ಬರ್ ಶಾಪ್ ಮಾಲೀಕನಿಗೆ ಮನಬಂದಂತೆ ಥಳಿಸಿದ ಕಿಡಿಗೇಡಿಗಳು| Speed News Kannada

Barber shop owner beaten up by miscreants|ಬಾರ್ಬರ್ ಶಾಪ್ ಮಾಲೀಕನಿಗೆ ಮನಬಂದಂತೆ ಥಳಿಸಿದ ಕಿಡಿಗೇಡಿಗಳು| Speed News Kannada

ಬೆಂಗಳೂರಿನ ಆವಲಹಳ್ಳಿಯಲ್ಲಿ ಸಣ್ಣ ವಿವಾದವೊಂದು ಭೀಕರ ಹಲ್ಲೆಗೆ ತಿರುಗಿದ ಘಟನೆ ಬೆಳಕಿಗೆ ಬಂದಿದೆ. ಸ್ಕಿನ್ ಶೈನ್ ಫ್ಯಾಮಿಲಿ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಸಲೂನ್ ಮಾಲೀಕ ಮೋಹನ್ ಕುಮಾರ್ ಪ್ರಪೋಸ್ ಮಾಡಿದರೆಂಬ ಆರೋಪ ಕೇಳಿಬಂದಿದೆ. ಇದನ್ನು ನಿರಾಕರಿಸಿದ ಹಿನ್ನೆಲೆ, ಆಕೆಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎನ್ನಲಾಗಿದೆ.

ಈ ಘಟನೆಗೆ ಆಕ್ರೋಶಗೊಂಡ ಬ್ಯೂಟಿಷಿಯನ್ ಪತಿ, ತನ್ನ ಬೆಂಬಲಿಗರೊಂದಿಗೆ ಸಲೂನ್‌ಗೆ ನುಗ್ಗಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾನೆ. ಗಲಾಟೆ ತಡೆಯಲು ಬಂದ ಮೋಹನ್ ಕುಮಾರ್ ಪತ್ನಿ ಶ್ರೀಜಾ ಮೇಲೂ ಹಲ್ಲೆ ನಡೆದಿದೆ. ಈ ವೇಳೆ ಸಲೂನ್‌ನಲ್ಲಿ ದಾಂಧಲೆ ನಡೆದಿದ್ದು, ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಸಂಬಂಧ ಮೋಹನ್ ಕುಮಾರ್ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.