2026-03-07 02:31:43

Basavaraj Bommai | ಬಿ.ಕೆ. ಹರಿಪ್ರಸಾದ್ ವಿರುದ್ದ ಕ್ರಮ ಜರುಗಿಸುವ ಅಗತ್ಯವಿದೆ: ಬಸವರಾಜ ಬೊಮ್ಮಾಯಿ | Speed News Kannada

Basavaraj Bommai | ಬಿ.ಕೆ. ಹರಿಪ್ರಸಾದ್ ವಿರುದ್ದ ಕ್ರಮ ಜರುಗಿಸುವ ಅಗತ್ಯವಿದೆ: ಬಸವರಾಜ ಬೊಮ್ಮಾಯಿ | Speed News Kannada

 

ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು  ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ..

ಈ ಕುರಿತು ಎಕ್ಸ್ ಮಾಡಿರುವ ಅವರು, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ. ರಾಜ್ಯಪಾಲರ ವಿರುದ್ದ  ಅವಾಚ್ಯ ಶಬ್ದ ಬಳಕೆ ಮಾಡಿರುವುದು ಸಂವಿಧಾನಕ್ಕೆ ಹಾಗೂ ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರಿಗೆ ಮಾಡಿರುವ ಅವಮಾನ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
ಅತ್ಯಂತ ಹಿರಿಯ ಶಾಸಕರಾದ ಬಿ.ಕೆ. ಹರಿಪ್ರಸಾದ ಅವರ ವರ್ತನೆ ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ. ಅವರ ವಿರುದ್ದ ಕ್ರಮ ಜರುಗಿರಸುವುದು ಅತ್ಯಂತ ಅವಶ್ಯಕತೆ ಇದೆ. ಈ ಹಿಂದೆ ಹಂಸರಾಜ ಭಾರದ್ವಾಜ್  ಅವರು ರಾಜ್ಯಪಾಲರಾಗಿದ್ದಾಗ ಹಲವಾರು ವಿಚಾರಗಳಲ್ಲಿ ತಮ್ಮ ಮಿತಿ ಮೀರಿ, ಕಾನೂನು ಮೀರಿ ವರ್ತನೆ ಮಾಡಿರುವ ಉದಾಹರಣೆ ಸಾಕಷ್ಟು ಇವೆ. ರಾಜಭವನ ಕಾಂಗ್ರೆಸ್ ಭವನ ಆಗಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮರೆತರೆ ಎಂದು ಪ್ರಶ್ನಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.