2026-06-25 02:03:33

basic needs to darshan in jail; supremecourt asks report|ಜೈಲಿನಲ್ಲಿ ದರ್ಶನ್‌ ಗೆ ಮೂಲಸೌಕರ್ಯ; ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ | Speed News Kannada

basic needs to darshan in jail; supremecourt asks report|ಜೈಲಿನಲ್ಲಿ ದರ್ಶನ್‌ ಗೆ ಮೂಲಸೌಕರ್ಯ; ವರದಿ ಸಲ್ಲಿಸಲು ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ | Speed News Kannada

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಮೂಲಸೌಕರ್ಯಗಳನ್ನು  ಒದಗಿಸಲಾಗಿದೆಯೇ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಜೆ.ಬಿ.ಪಾರ್ದಿವಾಲಾ ಮತ್ತು ನ್ಯಾ. ವಿಜಯ್ ಬಿಷ್ಣೋಯಿ ಅವರ ಪೀಠದಲ್ಲಿ ಪ್ರಕರಣದ ವಿಚಾರಣೆ ನಡೆಸಿತು.

ದರ್ಶನ್​ಗೆ 5 ಸ್ಟಾರ್ ಟ್ರೀಟ್‌ ಮೆಂಟ್ ಕೊಡಬೇಡಿ ಎಂದಿದ್ದೀರಿ. ಆದರೆ ಅವರಿಗೆ ಜೈಲಿನಲ್ಲಿ ಮೂಲಸೌಕರ್ಯಗಳನ್ನು ಒದಗಿಸಿಲ್ಲ, ಅವರನ್ನು ಅವರನ್ನು ಲೈಟ್‌ ಇಲ್ಲದ ಸೆಲ್ ನಲ್ಲಿ ಇರಿಸಲಾಗಿದೆ ಎಂದು ಹಿರಿಯ ವಕೀಲ ಮುಕುಲ್ ರೊಹಟಗಿ ವಾದಿಸಿದ್ದರು.

ಈ ಬಗ್ಗೆ ಒಂದು ವಾರದಲ್ಲಿ ವರದಿ ಸಲ್ಲಿಕೆಗೆ ಕೋರ್ಟ್‌ ಸೂಚನೆ ನೀಡಿತು. ಸಾಕ್ಷಿಗಳ ವಿಚಾರಣೆ ಪ್ರಗತಿ ಬಗ್ಗೆ ವರದಿ‌ ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಜೈಲಿನಲ್ಲಿ ತಮ್ಮನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ಕ್ವಾರಂಟೈನ್ ಸೆಲ್ ​ನಲ್ಲಿ ಇರಿಸಲಾಗಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆಯಾಗುತ್ತಿದೆ. ಸಹ-ಕೈದಿಗಳು ನಿಂದನೆ, ಮೂದಲಿಸುವುದು ಸೇರಿ ಹಲವು ರೀತಿ ಪ್ರಚೋದನೆ ನೀಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಋಣಾತ್ಮಕ ಪ್ರಚಾರದಿಂದ ಸಮಸ್ಯೆ ಬಿಗಡಾಯಿಸಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ತಮ್ಮ ಕಷ್ಟ ಹೇಳಿಕೊಂಡಿದ್ದರು.

ಜೈಲಿನಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಕುಟುಂಬದವರನ್ನು ಭೇಟಿ ಮಾಡಲು ಸೂಕ್ತ ಸಮಯ ನೀಡುತ್ತಿಲ್ಲ. ಸೆಲ್​ನ ಕಾರಿಡಾರ್​​ನಲ್ಲಿ ಮಾತ್ರ ವಾಕ್ ಮಾಡಲು ಅವಕಾಶ ನೀಡಿದ್ದಾರೆ. ಬೆನ್ನು ನೋವಿದ್ದರೂ ಸರಿಯಾಗಿ ಫಿಸಿಯೋಥೆರಪಿ ಮಾಡುತ್ತಿಲ್ಲ. ವೃತ್ತಿ ನಡೆಸುವ ಮೂಲಭೂತ ಹಕ್ಕಿನ ಹರಣವಾಗಲಿದೆ ಎಂದು ಜಾಮೀನು ಅರ್ಜಿಯಲ್ಲಿ ದರ್ಶನ್ ಆಪಾದಿಸಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.