2026-06-25 04:21:59

BBMP e-account misuse, sale agreement detected|ಬಿಬಿಎಂಪಿ ಇ-ಖಾತಾ ದುರುಪಯೋಗ, ಮಾರಾಟ ಒಪ್ಪಂದ ಪತ್ತೆ|Speed News Kannada

BBMP e-account misuse, sale agreement detected|ಬಿಬಿಎಂಪಿ ಇ-ಖಾತಾ ದುರುಪಯೋಗ, ಮಾರಾಟ ಒಪ್ಪಂದ ಪತ್ತೆ|Speed News Kannada

ಮಲ್ಲೇಶ್ವರದಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಸುಮಾರು 80 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿರುವ ಗಂಭೀರ ಆರೋಪ ಇದೀಗ ಬೆಳಕಿಗೆ ಬಂದಿದೆ. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಸ್ಕಾಂ, ಬಿಬಿಎಂಪಿ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.100 ವರ್ಷಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಹಳೆಯ ಮಲ್ಲೇಶ್ವರಂ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿರುವ ಈ ಜಾಗವನ್ನು 1913ರ ಮಾಪನ ನಕ್ಷೆಯಲ್ಲಿಯೇ ಪೊಲೀಸ್ ವಸತಿಗೃಹವಾಗಿ ಗುರುತಿಸಲಾಗಿದೆ. ಪ್ರಸ್ತುತವೂ ಇಲ್ಲಿ ನಾಲ್ವರು ಇನ್ಸ್‌ಪೆಕ್ಟರ್‌ಗಳ ಕುಟುಂಬಗಳು ವಾಸಿಸುತ್ತಿವೆ.

ಈ ಪ್ರಕರಣವು ವಿದ್ಯುತ್ ಬಿಲ್ಲಿನ ಮೂಲಕ ಬಹಿರಂಗವಾಗಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಕುಮಾರ್ ಅವರ ಮನೆಗೆ ಬಂದ ವಿದ್ಯುತ್ ಬಿಲ್ಲಿನಲ್ಲಿ ಮಹಾಲಕ್ಷ್ಮೀ ಎಂಬ ಖಾಸಗಿ ವ್ಯಕ್ತಿಯ ಹೆಸರು ಕಾಣಿಸಿಕೊಂಡಿದ್ದು, ಇದರಿಂದ ಅನುಮಾನಗೊಂಡ ಅವರು ವಿಚಾರಣೆ ನಡೆಸಿದ್ದಾರೆ. ತನಿಖೆಯಲ್ಲಿ ಆಸ್ತಿ ದಾಖಲೆಗಳನ್ನು ಅಕ್ರಮವಾಗಿ ಮಹಾಲಕ್ಷ್ಮೀ ಹೆಸರಿಗೆ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ, ಬಿಬಿಎಂಪಿ ಮೂಲಕ ಇ-ಖಾತಾವನ್ನೂ ಅಕ್ರಮವಾಗಿ ಮಾಡಿಸಿರುವುದು ಹಾಗೂ ಕೃಷ್ಣಮೂರ್ತಿ ಎಂಬಾತನಿಗೆ ಮಾರಾಟ ಮಾಡಲು ಒಪ್ಪಂದ ಪತ್ರ ಕೂಡ ಸಿದ್ಧಪಡಿಸಿರುವುದು ಬೆಳಕಿಗೆ ಬಂದಿದೆ.

ಇದೇ ವೇಳೆ, ಅಧಿಕಾರಿಗಳಿದ್ದರೂ ಜಾಗ ಖಾಲಿ ಮಾಡಿಸುತ್ತೇನೆ ಎಂದು ಮಹಿಳೆ ಕಡೆಯವರು ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಪ್ರಸ್ತುತ ಲೋಕಾಯುಕ್ತ ಇನ್ಸ್‌ಪೆಕ್ಟರ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರಂ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.