2026-06-08 02:44:09

BCCI gives Rs 130 crore bumper gift to Team India | ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐನಿಂದ 130 ಕೋಟಿ ರೂ. ಬಂಪರ್ ಗಿಫ್ಟ್ | Speed News Kannada

BCCI gives Rs 130 crore bumper gift to Team India | ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐನಿಂದ 130 ಕೋಟಿ ರೂ. ಬಂಪರ್ ಗಿಫ್ಟ್ | Speed News Kannada

ಟಿ20 ವಿಶ್ವಕಪ್‌ ಗೆದ್ದ ಖುಷಿಯಲ್ಲಿದ್ದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್ ನೀಡಿದ್ದು, ವಿಶ್ವಕಪ್ ಗೆದ್ದ ತಂಡಕ್ಕೆ 130 ಕೋಟಿ ರೂ. ನಗದು ಬಹುಮಾನ ಘೋಷಣೆ ಮಾಡಿದೆ. ಮಾ. 8 ರಂದು ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾವು ನ್ಯೂಜಿಲೆಂಡ್ ವಿರುದ್ಧ 96 ರನ್ ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನ ಬಳಿಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 130 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿದೆ.
ಕಳೆದ ಮಾ.9 ರಂದು ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ಲಿ ಭಾರತ ಗೆಲುವು ಸಾಧಿಸಿದ್ದಾಗ ಕೂಡ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 58 ಕೋಟಿ ರೂ.ಗಳ ನಗದು ಬಹುಮಾನವನ್ನು ಪ್ರಕಟಿಸಿತ್ತು.
ಅದಕ್ಕೂ ಹಿಂದೆ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ.ಗಳ ನಗದು ಬಹುಮಾನ ನೀಡಿ ಗೌರವಿಸಿತ್ತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.