2026-03-07 03:36:27

Behave as the leader of the opposition | ವಿಪಕ್ಷ ನಾಯಕನ ಸ್ಥಾನಕ್ಕೆ ತಕ್ಕಂತೆ ವರ್ತಿಸಿ ಕಾಂಗ್ರೆಸ್‌ ಲೇವಡಿ ಮಾಡಿದ್ದು ಯಾರನ್ನು| Speed News kannada

Behave as the leader of the opposition | ವಿಪಕ್ಷ ನಾಯಕನ ಸ್ಥಾನಕ್ಕೆ ತಕ್ಕಂತೆ ವರ್ತಿಸಿ ಕಾಂಗ್ರೆಸ್‌ ಲೇವಡಿ ಮಾಡಿದ್ದು ಯಾರನ್ನು| Speed News kannada

ಬೆಂಗಳೂರು: ಪುಕ್ಕಟೆ ಪ್ರಚಾರಕ್ಕಾಗಿ ಚಡ್ಡಿ ಹೊರುವ, ಬಜೆಟ್ ಪುಸ್ತಕ ಹರಿಯುವ‌ ನಡತೆಯಿಂದ ಮುಕ್ತವಾಗಿ ಪ್ರತಿಪಕ್ಷದ ನಾಯಕನ ಸ್ಥಾನದ ಘನತೆಗೆ ಅನುಗುಣವಾಗಿ ನಡೆದುಕೊಳ್ಳುವಂತೆ ಛಲವಾದಿ ನಾರಾಯಣಸ್ವಾಮಿ ಅವರಿಗೆ ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯ ರಮೇಶ್‌ ಬಾಬು ಆಗ್ರಹಪಡಿಸಿದ್ದಾರೆ.
ಈ ಸಂಬಂಧ ಅವರು ಪ್ರಕಟಣೆ ನೀಡಿದ್ದಾರೆ.
ತಲೆ ಮೇಲೆ ಚಡ್ಡಿ ಹೊತ್ತು ಸ್ವಾಭಿಮಾನವನ್ನು ಅಡವಿಟ್ಟು ಬಿಜೆಪಿಯಲ್ಲಿ ಬದುಕುತ್ತಿರುವ ಛಲವಾದಿರವರು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಜೆಟ್ ಗೆ ಬೆಂಕಿ ಇಡುವುದಾಗಿ ಹೇಳುವುದರ ಮೂಲಕ ಮತ್ತೊಮ್ಮೆ ಚಡ್ಡಿ ಹೊರುವ ಸಂಸ್ಕೃತಿಗೆ ಮುಂದಾಗಿದ್ದಾರೆ. 
ಕೇಂದ್ರ ಬಿಜೆಪಿ ಸರ್ಕಾರವು ತನ್ನ ಒಟ್ಟಾರೆ ಬಜೆಟ್ ನಲ್ಲಿ ಶೇಕಡಾ 10 ರಷ್ಟು ಹಣವನ್ನೂ ದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡುತ್ತಿಲ್ಲ. ದಲಿತ ವಿರೋಧಿ ನೀತಿಯನ್ನು ತನ್ನ ಆಡಳಿತದ ಉದ್ಯಗಲಕ್ಕೂ ಸಾರುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ಅಥವಾ ಮೀಸಲಾತಿ ವಿರೋಧಿ ನೀತಿಯನ್ನು ಉಸಿರಾಗಿಸಿಕೊಂಡಿರುವ ಸಂಘ ಪರಿವಾರವನ್ನು ಪ್ರಶ್ನೆ ಮಾಡುವ ತಾಕತ್ತು, ಧೈರ್ಯ ಅಥವಾ ನೈತಿಕತೆ ಛಲವಾದಿ ನಾರಾಯಣಸ್ವಾಮಿ ಅವರಿಗೆ ಇಲ್ಲ.
ಧರ್ಮದ ಹೆಸರಿನಲ್ಲಿ ಬೆಂಕಿ ಇಡುವ ಬಿಜೆಪಿ ಪ್ರವೃತ್ತಿಯ ಮುಂದುವರೆದ ಭಾಗವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ಪ್ರತಿಗೆ ಬೆಂಕಿ ಇಡುವ ಮಾತನಾಡಿರುತ್ತಾರೆ. ಇಡೀ ದೇಶದಲ್ಲಿ ಎಸ್‌.ಸಿ.ಪಿ ಮತ್ತು ಎಸ್.ಟಿ.ಪಿ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಿದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರವನ್ನು ಅನುಕರಣೆ ಮಾಡಲು ವಿಫಲವಾಗಿರುವ ಕೇಂದ್ರ ಬಿಜೆಪಿ ಸರ್ಕಾರ ಮತ್ತು ಇತರೆ ರಾಜ್ಯಗಳ ಬಿಜೆಪಿ ಸರ್ಕಾರಗಳನ್ನು ಪ್ರಶ್ನಿಸಲು ತಾಕತ್ತಿಲ್ಲದ ಅವರು ಇಂತಹ ಹೇಳಿಕೆಗಳ ಮೂಲಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪದೇ ಪದೇ ಮಸಿ ಬಳೆಯುತ್ತಿದ್ದಾರೆ. ಬಹುಶ ಬಿಜೆಪಿ ಮತ್ತು ಸಂಘ ಪರಿವಾರಕ್ಕೆ ಇದಕ್ಕಿಂತ ಹೆಚ್ಚು ಭಟ್ಟಂಗಿತನ ಪ್ರದರ್ಶನ ಮಾಡಲು ಇವರಿಗೆ ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.