2026-06-25 03:51:37

ಬೆಳಗಾವಿ: ಭೀಕರ ಅಪಘಾತ; 6 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು | Speed News Kannada

ಬೆಳಗಾವಿ: ಭೀಕರ ಅಪಘಾತ; 6 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು | Speed News Kannada

ಬೆಳಗಾವಿ: ಗೂಡ್ಸ್ ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ಅಸುನೀಗಿರುವ ಹೃದಯವಿದ್ರಾವಕ ದುರಂತ ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಮಹಾಂತೇಶ್ ಮಾನೆ, ಅವರ ಪತ್ನಿ ಸಾಕ್ಷಿ ಮಾನೆ ಹಾಗೂ 6 ತಿಂಗಳ ಮಗು ಎಂದು ಗುರುತಿಸಲಾಗಿದೆ.

ಮಹಾಂತೇಶ್ ಮಾನೆ ಕುಟುಂಬದೊಂದಿಗೆ ಬೊಮ್ಮನಾಳ ಗ್ರಾಮದಿಂದ ಬೈಕ್‌ನಲ್ಲಿ ರಾಯಬಾಗದತ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಪಟ್ಟಣದ ಹೊರವಲಯದ ರಸ್ತೆಯಲ್ಲಿ ಎದುರಿನಿಂದ ಅತಿ ವೇಗವಾಗಿ ಬಂದ ಗೂಡ್ಸ್ ಆಟೋ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದಂಪತಿ ಹಾಗೂ ಮಗು ರಸ್ತೆಗೆ ಬಿದ್ದು ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಆಟೋ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ರಾಯಬಾಗ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.