2026-09-13 12:45:32

BELAGAVI | ತಾಯಿ ಮಗು ಆತ್ಮಹತ್ಯೆ ಕೇಸ್ ಕೊನೆಗೂ ಪೊಲೀಸರ ಬಲೆಗೆ ಬಿದ್ದ ಪತಿ! | SNK

BELAGAVI | ತಾಯಿ ಮಗು ಆತ್ಮಹತ್ಯೆ ಕೇಸ್ ಕೊನೆಗೂ ಪೊಲೀಸರ ಬಲೆಗೆ ಬಿದ್ದ ಪತಿ! | SNK

ಬೆಳಗಾವಿ: ಬೆಳಗಾವಿ ಪೀರನವಾಡಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ತಾಯಿ ಹಾಗೂ ಮೂರು ವರ್ಷದ ಮಗುವಿನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೃತಳ ಪತಿ ನಾಗೇಶ ತಳವಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೃತ ಪ್ರೇಮಾ ತಳವಾರ ತನ್ನ ಮೂರು ವರ್ಷದ ಕಂದಮ್ಮ ಭುವನ್‌ನೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದರು. ಈ ಕರುಣಾಜನಕ ಘಟನೆಯಿಂದ ಆಕ್ರೋಶಗೊಂಡ ಮೃತೆಯ ಕುಟುಂಬಸ್ಥರು, ಇದು ಕೇವಲ ಆತ್ಮಹತ್ಯೆಯಲ್ಲ, ಪತಿ ಹಾಗೂ ಆತನ ಮನೆಯವರ ಮಾನಸಿಕ ಮತ್ತು ದೈಹಿಕ ಕಿರುಕುಳವೇ ಇದಕ್ಕೆ ಮುಖ್ಯ ಕಾರಣ ಎಂದು ಗಂಭೀರ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು.

ಮೃತರ ಕುಟುಂಬದವರು ನೀಡಿದ ದೂರಿನನ್ವಯ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪತಿ ನಾಗೇಶ ತಳವಾರ, ಅತ್ತೆ ಸುಶೀಲಾ ತಳವಾರ, ಮೈದುನ ಹಾಗೂ ನಾದಿನಿ ಸೇರಿದಂತೆ ಒಟ್ಟು ನಾಲ್ಕು ಜನರ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಘಟನೆಯ ನಂತರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ಸದ್ಯ ಪ್ರಕರಣದ ಪ್ರಮುಖ ಆರೋಪಿ ನಾಗೇಶ ಪೊಲೀಸರ ಅತಿಥಿಯಾಗಿದ್ದರೂ, ತಲೆಮರೆಸಿಕೊಂಡಿರುವ ಆತನ ತಾಯಿ ಸುಶೀಲಾ ತಳವಾರ ಹಾಗೂ ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ತಲೆಮರೆಸಿಕೊಂಡಿರುವವರ ಪತ್ತೆಗಾಗಿ ಈಗಾಗಲೇ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಉಳಿದವರನ್ನು ಹೆಡೆಮುರಿಯ ಕಟ್ಟಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.