2026-03-07 07:11:34

Belgaum Woman Stripped And Assaulted | ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜೈಲು ಶಿಕ್ಷೆ | Speed News Kannada

Belgaum Woman Stripped And Assaulted | ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜೈಲು ಶಿಕ್ಷೆ | Speed News Kannada

ಬೆಳಗಾವಿ: ಜಿಲ್ಲೆಯ ವಂಟಮೂರಿ ಎಂಬ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಆದೇಶ ಹೊರಡಿಸಿದೆ. 
ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ.
ನ್ಯಾಯಾದೀಶ .ಎಚ್.ಎಸ್.ಮಂಜುನಾಥ ಅವರು ಶಿಕ್ಷೆಯನ್ನು ಪ್ರಕಟಿಸಿದರು.ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಪರಾಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕಣ್ಣೀರಿಟ್ಟರು.
ವಂಟಮೂರಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿದ್ದರು. ಇವರು ಬೆಳಗಾವಿ ಕಚೇರಿಯಲ್ಲಿ ವಿವಾಹವಾಗಿದ್ದರು. ಇದರಿಂದ ಕೆರಳಿದ ಯುವತಿಯ  ಸಂಬಂಧಿಕರು  2023ರ ಡಿಸೆಂಬರ್ 11ರಂದು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದರು. ಅವರ ಮನೆಯನ್ನೂ ಧ್ವಂಸಗೊಳಿಸಿದ್ದರು.
ಈ ಹಲ್ಲೆ ಮತ್ತು ಮನೆ ಕೆಡವಿದ ವೀಡಿಯೋ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.