2026-03-07 05:44:48

Bengaluru blast plot | ಬೆಂಗಳೂರು ಸ್ಫೋಟಕ್ಕೆ ಸಂಚು LeT ಉಗ್ರ ಜುನೈದ್ ಮಾಹಿತಿಗೆ ನಗದು ಬಹುಮಾನ | Speed News Kannada

Bengaluru blast plot | ಬೆಂಗಳೂರು ಸ್ಫೋಟಕ್ಕೆ ಸಂಚು LeT ಉಗ್ರ ಜುನೈದ್ ಮಾಹಿತಿಗೆ ನಗದು ಬಹುಮಾನ  | Speed News Kannada

ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಲಷ್ಕರ್-ಇ-ತೊಯ್ಬಾ (LeT) ಉಗ್ರ ಸಂಘಟನೆಯ ಭಯೋತ್ಪಾದಕ ಜುನೈದ್ ಅಹ್ಮದ್ ಕುರಿತು ಮಾಹಿತಿ ನೀಡಿದವರಿಗೆ ರೂ.5 ಲಕ್ಷ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ.
2023ರಲ್ಲಿ ಬೆಂಗಳೂರಿನಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ ಪ್ರಕರಣದಲ್ಲಿ ಐವರು ಶಂಕಿತ ಉಗ್ರರನ್ನು ಸಿಸಿಬಿ ಬಂಧಿಸಿತ್ತು. ಈ ಪ್ರಕರಣದಲ್ಲಿ ಜುನೈದ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈತನ ವಿರುದ್ಧ 2023 ಜುಲೈನಲ್ಲಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಜುನೈದ್ ಅಹ್ಮದ್ ನಗರದ ನಾಗಶೆಟ್ಟಿಹಳ್ಳಿಯ ಮಲ್ಲಿಗೆ ಲೇಔಟ್ ನಿವಾಸಿ. ಈತ  ಜುನೈದ್, ಜೆಡಿ ಜಮ್ಶೀದಾ, ಜಾನ್, ಸುಹಾನಾ, ಡಿಜೆ ರಿಟ್ಜ್, ಜಮೀಲಾ ಎಂಬ ಹಲವು ಹೆಸರುಗಳಿಂದ ಗುರುತಿಸಿಕೊಂಡಿದ್ದ. 33 ವರ್ಷದ ಜುನೈದ್ ಅಹ್ಮದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ, ಗುಂಡು ಹಾಗೂ ಸ್ಫೋಟಕ ವಸ್ತುಗಳ ಜಪ್ತಿ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ  ಎಂದು ಎನ್‌ಐಎ ತಿಳಿಸಿದೆ.
ಈತನ ಬಂಧನಕ್ಕೆ ನೆರವಾಗುವ ಯಾವುದೇ ಮಾಹಿತಿ ನೀಡಿದವರ ಗುರುತನ್ನು ರಹಸ್ಯವಾಗಿಡಲಾಗುತ್ತದೆ. ಮಾಹಿತಿಯನ್ನು 080-29510900 ಅಥವಾ 8904241100 ಗೆ ಮಾಹಿತಿ ನೀಡಬಹುದು ಎಂದು ಎನ್‌ಐಎ ಹೇಳಿದೆ.a

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.