2026-03-07 01:38:24

Bengaluru double decker metro| ಸರ್ಕಾರದ ಕನಸು ಭಗ್ನ ಬೆಂಗಳೂರು ಡಬಲ್‌ ಡೆಕ್ಕರ್‌ ಮೆಟ್ರೋಗೆ ತಿಲಾಂಜಲಿ? | Speed News Kannada

Bengaluru double decker metro| ಸರ್ಕಾರದ ಕನಸು ಭಗ್ನ ಬೆಂಗಳೂರು ಡಬಲ್‌ ಡೆಕ್ಕರ್‌ ಮೆಟ್ರೋಗೆ ತಿಲಾಂಜಲಿ? | Speed News Kannada

ನವದೆಹಲಿ: ಬೆಂಗಳೂರಿನಲ್ಲಿ ಡಬಲ್ ಡೆಕ್ಕರ್ ಮೆಟ್ರೋ ಯೋಜನೆಗೆ ತಿಲಾಂಜಲಿ ಹಾಡಲಾಗಿದೆಯೇ? ಇಂತಹುದ್ದೊಂದು ಸುದ್ದಿ ರಾಜಕೀವ ವಲಯಗಳಲ್ಲಿ ಹರಿದಾಡುತ್ತಿದೆ. ಬೆಂಗಳೂರು ಸೆಂಟ್ರಲ್‌ ಲೋಕಸಭಾ ಸದಸ್ಯ ಪಿ.ಸಿ.ಮೋಹನ್‌ ಅವರು ಕೇಂದ್ರ ಸರ್ಕಾರ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ಹೇಳಿದ್ದರೆ ಬೆಂಗಳೂರು ಉಸ್ತುವಾರಿ ವಹಿಸಿಕೊಂಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಈ ವಿಷಯ ತಮಗೆ ತಿಳಿದಿಲ್ಲ ಎಂದು ಹೇಳಿದ್ದಾರೆ. 
ಹೆಬ್ಬಾಳದಿಂದ ಸರ್ಜಾಪುರವರೆಗೆ 28,405  ಕೋಟಿ ರೂ.ಗಳ ವೆಚ್ಚದಲ್ಲಿ ಡಬಲ್‌ ಡೆಕ್ಕರ್‌ ಮೆಟ್ರೋ ಯೋಜನೆ ಕಾರ್ಯಗತಗೊಳಿಸಲು ರಾಜ್ಯ ಸರ್ಕಾರ ಉದ್ದೇಶಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮತಿ ನೀಡಿಲ್ಲ ಎಂದು ಮೋಹನ್‌ ಅವರು ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 
ಈ ಯೋಜನೆ ಕೆಲವು ಭಾಗಗಳಲ್ಲಿ ಉತ್ತಮವಾದರೂ ಕೆಲವು ಪ್ರದೇಶಗಳಲ್ಲಿ ಅಡ್ಡಿ ಆತಂಕಗಳನ್ನುಂಟು ಮಾಡಲಿದೆ. ಡಬಲ್‌ ಡೆಕ್ಕರ್‌ ಗೆ ಪರ್ಯಾಯವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕಷ್ಟ ಎಂದು ಹೇಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. 
ನನಗೆ ಈ ವಿಷಯ ಗೊತ್ತಿಲ್ಲ. ಬೆಂಗಳೂರಿನಲ್ಲಿ ಈಗಾಗಲೇ ನಿರ್ಮಾಣವಾಗಿರುವ ಡಬಲ್ ಡೆಕ್ಕರ್ ಮೆಲ್ಸೇತುವೆಯನ್ನು ಸ್ವತಃ ಪ್ರಧಾನಮಂತ್ರಿಗಳು ನೋಡಿದ್ದಾರೆ. ಈ ಯೋಜನೆ ಗೆ ಮೆಟ್ರೋ ಸಂಸ್ಥೆ 50% ಅನುದಾನ ಹಾಕಿದರೆ, ಕರ್ನಾಟಕ ಸರ್ಕಾರ (ಜಿಬಿಎ) 50% ಅನುದಾನ ಭರಿಸಲಿದೆ. ರಸ್ತೆ ಅಗಲೀಕರಣ ಕಷ್ಟವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆ ಜಾರಿಗೊಳಿಸುತ್ತಿದ್ದೇವೆ. ಕೇಂದ್ರ ಸರ್ಕಾರವೇ ಈ ಯೋಜನೆ ಕೈಗೊಳ್ಳುವಂತೆ ಹೇಳಿದ್ದು, ಅದನ್ನು ಮುಂದುವರಿಸುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ. ಡಬಲ್ ಡೆಕ್ಕರ್ ನಿಂದ ಮೆಟ್ರೋ ರೈಲಿಗೆ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗುತ್ತಾರೆ ಎಂಬ ಬಗ್ಗೆ ಉತ್ತರಿಸಿ, ರಸ್ತೆಯಲ್ಲಿ ಓಡಾಡುವ ಪ್ರಯಾಣಿಕರೇ ಬೇರೆ, ಮೆಟ್ರೋ ಬಳಸುವ ಪ್ರಯಾಣಿಕರೇ ಬೇರೆ. ಒಂದು ವೇಳೆ ಈ ಯೋಜನೆಯಲ್ಲಿ ನೂನ್ಯತೆಗಳಿದ್ದರೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುವುದಾಗಿ ಶಿವಕುಮಾರ್‌ ಹೇಳಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.