2026-04-23 08:02:49

Bengaluru Police inspect Chinnaswamy Stadium to conduct IPL match | ಐಪಿಎಲ್ ನಡೆಸಲು ಚಿನ್ನಸ್ವಾಮಿ ಕ್ರೀಡಾಂಗಣ ಪರಿಶೀಲನೆ ನಡೆಸಿ ಒಕೆ ಎಂದ ಬೆಂಗಳೂರು ಪೊಲೀಸರು | Speed News Kannada

Bengaluru Police inspect Chinnaswamy Stadium to conduct IPL match | ಐಪಿಎಲ್ ನಡೆಸಲು ಚಿನ್ನಸ್ವಾಮಿ ಕ್ರೀಡಾಂಗಣ ಪರಿಶೀಲನೆ ನಡೆಸಿ ಒಕೆ ಎಂದ ಬೆಂಗಳೂರು ಪೊಲೀಸರು | Speed News Kannada

ಬೆಂಗಳೂರು ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ 2026ರ ಪ್ರಯುಕ್ತ ನಿನ್ನೆ ಬೆಂಗಳೂರು ನಗರ ಪೊಲೀಸ್ ವಿಭಾಗದ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ಪೊಲೀಸರು ಕೆಎಸ್‌ಸಿಎ ಮತ್ತು ಆರ್‌ಸಿಬಿ ತಂಡದ ಅಧಿಕಾರಿಗಳ ಜೊತೆಯಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಪರಿಶೀಲನೆ ನಡೆಸಿದರು.
ಈ ಕುರಿತು ಮಾಹಿತಿ ನೀಡಿ ಬೆಂಗಳೂರು ಪೊಲೀಸ್ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ. ಮುಂಬರುವ ಐಪಿಎಲ್ ಪಂದ್ಯಗಳು ನಡೆಯುವ ಹಿನ್ನೆಲೆಯಲ್ಲಿ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಪಾರ್ಕಿಂಗ್, ಆಗಮನ-ನಿರ್ಗಮನ, ಸ್ಟ್ಯಾಂಡ್‌ಳ ಸ್ಥಿತಿಗತಿ ಸೇರಿದಂತೆ ವಿವಿಧ ಸೌಕರ್ಯಗಳ ಖುದ್ದು ಪರಿಶೀಲನೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಅಲ್ಲದೇ ಪ್ರಮುಖವಾಗಿ ಕೈಗೊಂಡಿರುವ ನಿಯಮಾವಳಿ ಪ್ರಕಾರ ಜನಸಂದಣಿಯನ್ನು ನಿಯಂತ್ರಿಸುವ ಅವಕಾಶಗಳನ್ನು ಪರಿಶೀಲಿಸಲಾಯಿತು ಎಂದು ತಿಳಿಸಿದರು. ಪರಿಶೀಲನೆ ನಂತರ ಎಲ್ಲಾ ಕ್ರೀಡಾಭಿಮಾನಿಗಳಿಗೆ ಸುಗಮ ಪ್ರವೇಶ ಮತ್ತು ಸುರಕ್ಷಿತ ಅನುಭವವನ್ನು ಖಚಿತಪಡಿಸಿಕೊಳ್ಳಲಾಯಿತು ಐಪಿಎಲ್ ಕ್ರಿಕೆಟ್ ಪಂದ್ಯಗಳನ್ನು ಸುರಕ್ಷತೆಯೊಂದಿಗೆ ಆನಂದಿಸಿ ಎಂದು ಬೆಂಗಳೂರು ಪೊಲೀಸರು ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಪಂದ್ಯಗಳನ್ನು ಆಡಲಿದೆ. ಇನ್ನೆರಡು ಪಂದ್ಯಗಳನ್ನು ಛತ್ತೀಸಗಡದ ರಾಯಪುರದಲ್ಲಿ ಆಡಲಿದೆ.
ಕಳೆದ ವರ್ಷ ಆರ್‌ಸಿಬಿಯ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿತ್ತು. ಅದರಲ್ಲಿ 11 ಅಭಿಮಾನಿಗಳು ದುರ್ಮರಣಕ್ಕೀಡಾಗಿದ್ದರು. ಐಪಿಎಲ್ ಆರಂಭವಾಗಿ 18 ವರ್ಷಗಳ ನಂತರ ಆರ್‌ಸಿಬಿ ಜಯಿಸಿದ್ದ ಚೊಚ್ಚಲ ಪ್ರಶಸ್ತಿ ಸಂಭ್ರಮವು ಕರಾಳ ದಿನವಾಗಿ ಮಾರ್ಪಾಡಾಗಿತ್ತು. ಉತ್ಸಾಹದ ಕ್ಷಣಗಳು ಆರಂಭವಾಗುವ ಮುನ್ನ ಸುರಕ್ಷತೆಯು ಮುನ್ನಡೆ ಸಾಧಿಸಿದೆ!
ಮುಂಬರುವ ಐಪಿಎಲ್ ಪಂದ್ಯಗಳು ನಡೆಯುವ ಹಿನ್ನೆಲೆಯಲ್ಲಿ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜಂಟಿ ಪರಿಶೀಲನೆ ನಡೆಸಲಾಯಿತು. ಇದರಲ್ಲಿ ಸಾರ್ವಜನಿಕ ಸುರಕ್ಷತೆ, ಗುಂಪು ಚಲನೆ, ಪ್ರವೇಶ ಮತ್ತು ನಿರ್ಗಮನ ಬಾಗಿಲುಗಳು ಹಾಗೂ ಸಂಚಾರ ನಿರ್ವಹಣೆಯನ್ನು ಪರಿಶೀಲಿಸಲಾಯಿತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.