2026-03-07 06:26:32

Bhavya Gowda celebrated her birthday | ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಕರ್ಣ ಧಾರಾವಾಹಿ ನಟಿ ಭವ್ಯಾ ಗೌಡ | Speed News Kannada

Bhavya Gowda celebrated her birthday | ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಕರ್ಣ ಧಾರಾವಾಹಿ ನಟಿ ಭವ್ಯಾ ಗೌಡ | Speed News Kannada

ಕನ್ನಡ ಕಿರುತೆರೆ ನಟಿ ಭವ್ಯಾ ಗೌಡ ಅವರು ನಿನ್ನೆ (ಫೆ.26) ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ಗೀತಾ' ಧಾರಾವಾಹಿ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟರು ಭವ್ಯಾ ಗೌಡ. ಅಲ್ಲಿಂದ ಅವರ ಹೊಸ ಪಯಣ ಶುರುವಾಯಿತು. ಭವ್ಯಾ ಗೌಡ ಅವರು ಗೀತಾ ಧಾರಾವಾಹಿ ಮೂಲಕವೇ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡರು. ಈ ಮೂಲಕವೇ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 11ಕ್ಕೆ ಸ್ಪರ್ಧಿಯಾಗಿ ಕಾಲಿಟ್ಟು ಟಾಪ್ 5 ಫೈನಲಿಸ್ಟ್‌ ಗಳಲ್ಲಿ ಒಬ್ಬರು ಆಗಿದ್ದರು. ಇದಾದ ನಂತರ ನಟಿ ಭವ್ಯಾ ಗೌಡ ಅವರು ಪ್ರಸ್ತುತವಾಗಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಕರ್ಣ' ಧಾರಾವಾಹಿಯಲ್ಲಿ ನಿಧಿ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕರ್ಣನ ಹುಡುಗಿ, ನಿತ್ಯಳ ಮುದ್ದು ತಂಗಿಯಾಗಿ ನಟಿಸುತ್ತಿರುವ ಭವ್ಯಾ ಗೌಡ ಅವರ ಅಭಿನಯಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ಜೊತೆಗೆ 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್' ಶೋನಲ್ಲಿ ಭರ್ಜರಿಯಾಗಿ ನೃತ್ಯ ಮಾಡುತ್ತಿದ್ದಾರೆ. ಭವ್ಯಾ ಗೌಡ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ನಿನ್ನೆ ಅವರ ಹುಟ್ಟುಹಬ್ಬವನ್ನು ಕುಟುಂಬಸ್ಥರು ಅದ್ಧೂರಿಯಾಗಿ ಆಚರಣೆ ಮಾಡಿದ್ದಾರೆ. ಈ ಹುಟ್ಟುಹಬ್ಬದ ಸಂಭ್ರಮದಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಕಿರುತೆರೆ ಕಲಾವಿದರು ಭಾಗಿಯಾಗಿದ್ದರು. ಅದರಲ್ಲೂ ವಿಶೇಷವಾಗಿ ಗೀತಾ ಧಾರಾವಾಹಿಯಲ್ಲಿ ಒಟ್ಟಿಗೆ ನಟಿಸಿದ್ದ ವಿಜಯ್ ಅಂದರೆ ಬಿಗ್‌ಬಾಸ್ ಸ್ಪರ್ಧಿ ಧನುಷ್ ಗೌಡ ಕೂಡ ಭ್ಯವಾ ಗೌಡ ಅವರ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದರು. ಬಿಗ್‌ಬಾಸ್ ಸೀಸನ್ 12ರ ಸ್ಪರ್ಧಿಗಳಾದ ಕಾವ್ಯ ಗೌಡ, ಸ್ಪಂದನಾ ಸೋಮಣ್ಣ, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ. ನಮ್ರತಾ ಗೌಡ ಸೇರಿದಂತೆ ಹಲವಾರು ಮಂದಿ ಭಾಗಿಯಾಗಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.