2026-03-07 04:55:43

Big Friday to Kejriwal | ಬಿಗ್‌ ಫ್ರೈಡೆ ಟು ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಖುಲಾಸೆ | Speed News Kannada

Big Friday to Kejriwal | ಬಿಗ್‌ ಫ್ರೈಡೆ ಟು ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಖುಲಾಸೆ | Speed News Kannada

ದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರಿಗೆ ಶುಭ ಶುಕ್ರವಾರ. ಬಹುಕೋಟಿ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರಿಗೆ ದೆಹಲಿಯ ರೌಸ್‌ ಅವೆನ್ಯೂ  ಹೈಕೋರ್ಟ್ ಬಿಗ್‌  ರಿಲೀಫ್ ನೀಡಿದೆ.
 ಕೇಜ್ರಿವಾಲ್  ಜೊತೆ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರನ್ನೂ ಖುಲಾಸೆಗೊಳಿಸಲಾಗಿದೆ. ಅಕ್ರಮ ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಲಾಗಿತ್ತು. 
ಇಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ. ಸಾಕ್ಷಿ ಸಾಬೀತು ಪಡಿಸುವಲ್ಲಿ ಸಿಬಿಐ ವಿಫಲವಾಗಿದೆ ಎಂದು ಆದೇಶ ನೀಡಿದೆ.
ತೀರ್ಪು ಪ್ರಕಟವಾಗುವಾಗ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಇಬ್ಬರೂ ನ್ಯಾಯಾಲಯದಲ್ಲಿ ಹಾಜರಿದ್ದರು. 2021ರಲ್ಲಿ ಅಧಿಕಾರದಲ್ಲಿದ್ದ ಕೇಜ್ರಿವಾಲ್‌ ಸರ್ಕಾರ ಅಬಕಾರಿ ನೀತಿಯನ್ನು ಜಾರಿಗೊಳಿಸಿತ್ತು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.