ದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಶುಭ ಶುಕ್ರವಾರ. ಬಹುಕೋಟಿ ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರಿಗೆ ದೆಹಲಿಯ ರೌಸ್ ಅವೆನ್ಯೂ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಕೇಜ್ರಿವಾಲ್ ಜೊತೆ ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರನ್ನೂ ಖುಲಾಸೆಗೊಳಿಸಲಾಗಿದೆ. ಅಕ್ರಮ ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಲಾಗಿತ್ತು.
ಇಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ ಕೇಜ್ರಿವಾಲ್ ಮತ್ತು ಸಿಸೋಡಿಯಾ ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ. ಸಾಕ್ಷಿ ಸಾಬೀತು ಪಡಿಸುವಲ್ಲಿ ಸಿಬಿಐ ವಿಫಲವಾಗಿದೆ ಎಂದು ಆದೇಶ ನೀಡಿದೆ.
ತೀರ್ಪು ಪ್ರಕಟವಾಗುವಾಗ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಇಬ್ಬರೂ ನ್ಯಾಯಾಲಯದಲ್ಲಿ ಹಾಜರಿದ್ದರು. 2021ರಲ್ಲಿ ಅಧಿಕಾರದಲ್ಲಿದ್ದ ಕೇಜ್ರಿವಾಲ್ ಸರ್ಕಾರ ಅಬಕಾರಿ ನೀತಿಯನ್ನು ಜಾರಿಗೊಳಿಸಿತ್ತು.