2026-06-25 02:26:02

Big twist in Byadarahalli Kiran murder case, young woman reveals truth | ಬ್ಯಾಡರಹಳ್ಳಿ ಕಿರಣ್‌ ಕೊಲೆ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್‌, ಸತ್ಯ ಬಾಯ್ಬಿಟ್ಟ ಯುವತಿ | Speed news kannada

Big twist in Byadarahalli Kiran murder case, young woman reveals truth |  ಬ್ಯಾಡರಹಳ್ಳಿ ಕಿರಣ್‌ ಕೊಲೆ ಕೇಸ್‌ನಲ್ಲಿ ಬಿಗ್‌ ಟ್ವಿಸ್ಟ್‌, ಸತ್ಯ ಬಾಯ್ಬಿಟ್ಟ ಯುವತಿ | Speed news kannada

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಿರಣ್ ಕೊಲೆ ಪ್ರಕರಣದಲ್ಲಿ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಕೊಲೆ ಸಂಬಂಧ ಒಂದೊಂದೇ ಭಯಾನಕ ವಿಚಾರಗಳು ಇದೀಗ ಹೊರಬರುತ್ತಿದ್ದು, ಸದ್ಯ ಆತನ ಪ್ರೇಯಸಿ ಪ್ರೇಮಾ ಪೊಲೀಸರ ಮುಂದೆ ಎಲ್ಲಾ ಸತ್ಯವನ್ನು ಬಿಚ್ಚಿಟ್ಟಿದ್ದಾಳೆ. ಕಿರಣ್ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ ಹಾಕಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ ಎಂದು ಹೇಳಿದ್ದು. ಯುವತಿ ಹೇಳಿಕೆ ಕೇಳಿ ಖುದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಪೊಲೀಸರ ತನಿಖೆಯ ವೇಳೆ ದೊರೆತ ಮಾಹಿತಿ ಪ್ರಕಾರ, ಕಳೆದ ವರ್ಷ ಆಗಸ್ಟ್‌ನಲ್ಲಿ ಪ್ರೇಮಾಗೆ ಕಿರಣ್ ಪರಿಚಯವಾಗಿದ್ದ. ಈ ವರ್ಷದ ಫೆಬ್ರವರಿ 14ರ ‘ವ್ಯಾಲೆಂಟೈನ್ಸ್ ಡೇ’ ದಿನ ಪ್ರೇಮಾ ತನ್ನ ಪ್ರೀತಿಯನ್ನು ನಿವೇದಿಸಿದ್ದಳು. ಕಿರಣ್ ಕೂಡ ಒಪ್ಪಿಕೊಂಡಿದ್ದ. ಪ್ರಿಯಕರನಿಗಾಗಿ ಪ್ರೇಮಾ ಬರೋಬ್ಬರಿ 4.5 ಲಕ್ಷ ರೂಪಾಯಿ ಮೌಲ್ಯದ ಬೈಕ್ ಮತ್ತು ಮೊಬೈಲ್ ಫೋನ್ ಕೊಡಿಸಲು ಮುಂದಾಗಿದ್ದಳು. ಕೊಲೆ ಕೃತ್ಯ ನಡೆದ ದಿನವೂ ಇಬ್ಬರೂ ಸೇರಿ ಬೈಕ್ ನೋಡಲು ಹೋಗಿದ್ದರು ಎನ್ನಲಾಗಿದೆ. ಆದರೆ, ಇತ್ತೀಚೆಗೆ ಕಿರಣ್ ಪ್ರೇಮಾಳಿಂದ ಅಂತರ ಕಾಯ್ದುಕೊಳ್ಳಲು ಶುರು ಮಾಡಿದ್ದ. ಇದರಿಂದ ಮನನೊಂದಿದ್ದ ಪ್ರೇಮಾ, ಆತನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮೊದಲೇ ತೀರ್ಮಾನಿಸಿದ್ದಳು. ಅದಕ್ಕಾಗಿಯೇ ಪೆಟ್ರೋಲ್ ಮತ್ತು ಸೀಮೆಎಣ್ಣೆಯನ್ನು ಮೊದಲೇ ಖರೀದಿಸಿ ತಂದಿಟ್ಟುಕೊಂಡಿದ್ದಳು. ಮದುವೆ ವಿಚಾರವಾಗಿ ಮನೆಯಲ್ಲಿ ಮತ್ತೆ ಗಲಾಟೆ ಆರಂಭವಾದಾಗ, ಪ್ಲಾನ್ ಪ್ರಕಾರ ಕಿರಣ್‌ನನ್ನು ಮಂಚಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದಾಳೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.