2026-04-28 05:51:16

Bigg Boss ex-contestant Rajat strikes again|ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ರಜತ್‌ನಿಂದ ಮತ್ತೆ ಪುಂಡಾಟ|Speed News Kannada

Bigg Boss ex-contestant Rajat strikes again|ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ರಜತ್‌ನಿಂದ ಮತ್ತೆ ಪುಂಡಾಟ|Speed News Kannada

ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಲು ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್, ಪೆಟ್ರೋಲ್ ಬಳಸಿ ಬಾಂಬ್ ಮಾದರಿಯಲ್ಲಿ ಸ್ಫೋಟಿಸಿ ವಿಡಿಯೋ ಶೂಟ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಖಂಡನೆ ವ್ಯಕ್ತವಾಗಿದೆ.ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಇಂತಹ ಅಪಾಯಕಾರಿ ಕೃತ್ಯ ಎಸಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಒಂದು ವೇಳೆ ಅನಾಹುತ ಸಂಭವಿಸಿದ್ದರೆ ಯಾರು ಹೊಣೆ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ರಜತ್ ಈ ಹಿಂದೆ ಮೈಸೂರಿನ ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿಸಿಕೊಂಡು ವಿವಾದಕ್ಕೀಡಾಗಿದ್ದರು. ಅದಕ್ಕೂ ಮುನ್ನ ಮಚ್ಚು ಹಿಡಿದು ಪೋಸ್ ಕೊಟ್ಟಿದ್ದಕ್ಕಾಗಿ ಜೈಲು ಸೇರಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು."ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯಲಿಲ್ಲವೇ?" ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ರಜತ್ ವಿರುದ್ಧ ತೀವ್ರ ಟೀಕೆಗಳನ್ನು ಮಾಡುತ್ತಿದ್ದಾರೆ. ಪದೇ ಪದೇ ಇಂತಹ ಪುಂಡಾಟಿಕೆ ನಡೆಸುತ್ತಿರುವ ರಜತ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.