2026-06-25 04:03:41

Bike collides with bus over love breakup, youth burnt alive|ಲವ್ ಬ್ರೇಕಪ್ ಹಿನ್ನೆಲೆ ಬೈಕ್ ಬಸ್‌ಗೆ ಡಿಕ್ಕಿ, ಯುವಕ ಸಜೀವ ದಹನ|Speed News Kannada

Bike collides with bus over love breakup, youth burnt alive|ಲವ್ ಬ್ರೇಕಪ್ ಹಿನ್ನೆಲೆ ಬೈಕ್ ಬಸ್‌ಗೆ ಡಿಕ್ಕಿ, ಯುವಕ ಸಜೀವ ದಹನ|Speed News Kannada

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಹೃದಯ ಕಲುಕುವ ಘಟನೆ ನಡೆದಿದ್ದು, ಲವ್ ಬ್ರೇಕಪ್ ಹಿನ್ನೆಲೆ ಯುವಕ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ಕನ್ನೊಳ್ಳಿ ಟೋಲ್‌ಗೇಟ್ ಬಳಿ 19 ವರ್ಷದ ಅಭಿಷೇಕ ಸೈಬಗೌಡ ನಾಗರಳ್ಳಿ ತನ್ನ ಬೈಕ್ ಅನ್ನು ಸರ್ಕಾರಿ ಬಸ್‌ಗೆ ಡಿಕ್ಕಿ ಹೊಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡಿಕ್ಕಿ ಹೊಡೆದ ಪರಿಣಾಮ ಬೈಕ್‌ಗೆ ಬೆಂಕಿ ಹೊತ್ತಿಕೊಂಡು, ಬಳಿಕ ಬಸ್‌ಗೂ ಬೆಂಕಿ ಆವರಿಸಿಕೊಂಡಿದ್ದು, ಯುವಕ ಸಜೀವ ದಹನಗೊಂಡಿದ್ದಾನೆ. ಪ್ರಯಾಣಿಕರು ತಕ್ಷಣ ಬಸ್ಸಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಆತ್ಮಹತ್ಯೆಗೂ ಮುನ್ನ ಯುವಕ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.