2026-03-07 02:31:28

Biklu Shiva murder case | ಬಿಕ್ಲು ಶಿವ ಕೊಲೆ ಪ್ರಕರಣ ವಿಮಾನ ನಿಲ್ದಾಣದಲ್ಲೇ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅರೆಸ್ಟ್ | Speed News Kannada

Biklu Shiva murder case | ಬಿಕ್ಲು ಶಿವ ಕೊಲೆ ಪ್ರಕರಣ ವಿಮಾನ ನಿಲ್ದಾಣದಲ್ಲೇ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅರೆಸ್ಟ್ | Speed News Kannada

ಬೆಂಗಳೂರು: ಕೆ ಆರ್‌ ಪುರದ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಬಂಧಿಸಲಾಗಿದೆ.
ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದ ನಂತರ ಅವರಿಗೆ ಶರಣಾಗತಿ ಬಿಟ್ಟು ಅನ್ಯ ಮಾರ್ಗ ಇರಲಿಲ್ಲ.
ಭೈರತಿ ಬಸವರಾಜ್ ಅವರು ಇಂದು ಸಂಜೆ ಏಳು ಗಂಟೆಗೆ ಅಹಮದಾಬಾದ್‌ ನಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. 
 ಭೈರತಿ ಬಸವರಾಜ್  ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕಳೆದ ಮಂಗಳವಾರ ಹೈಕೋರ್ಟ್‌ ವಜಾಗೊಳಿಸಿತ್ತು. ನಂತರ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೇಳಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. 
ಪ್ರಕರಣದ ನಂತರ ಬಸವರಾಜ್ ತಲೆಮರೆಸಿಕೊಂಡಿದ್ದರು. ಭೈರತಿ ಬಸವರಾಜ್ ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್‌ಔಟ್‌’ ನೋಟಿಸ್‌ ಸಹ ಜಾರಿ ಮಾಡಲಾಗಿತ್ತು.
ಕಳೆದ ವರ್ಷ ಜುಲೈನಲ್ಲಿ ಬಿಕ್ಲು ಶಿವನನ್ನು ಆತನ ಎದುರಾಳಿಗಳು ಕೊಚ್ಚಿ ಕೊಲೆ ಮಾಡಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತಿಳಿದು ಬಂದಿತ್ತು. ಶಾಸಕರು ಆರೋಪಿಗಳ ಜತೆ ನಿಕಟ ಸಂಪರ್ಕ ಹೊಂದಿರುವುದು ತನಿಖೆಯಿಂದ ದೃಢಪಟ್ಟಿತ್ತು. ಶಾಸಕ ಭೈರತಿ ಬಸವರಾಜ್ ಅವರು ಐದನೇ ಆರೋಪಿಯಾಗಿದ್ದಾರ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.