2026-04-23 04:57:12

BJP delegation reaches Election Commission | ಮೋದಿ ಟೆರರಿಸ್ಟ್ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ | Speed news kannada

BJP delegation reaches Election Commission | ಮೋದಿ ಟೆರರಿಸ್ಟ್ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ | Speed news kannada

ಮೋದಿ ಒಬ್ಬ ಭಯೋತ್ಪಾದಕʼ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನ ಖಂಡಿಸಿ ಬಿಜೆಪಿ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಖರ್ಗೆ ಅವರ ಹೇಳಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಿಲು ಕೇಂದ್ರ ಸಚಿವ ಕಿರಣ್ ರಿಜಿಜು ನೇತೃತ್ವದ ಬಿಜೆಪಿ ನಿಯೋಗ ಇಂದು ಚುನಾವಣಾ ಆಯೋಗವನ್ನ ಭೇಟಿ ಮಾಡಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಅರ್ಜುನ್ ರಾಮ್ ಮೇಘವಾಲ್ ಸೇರಿದಂತೆ ಹಿರಿಯ ನಾಯಕರು ನಿಯೋಗದಲ್ಲಿದ್ದರು. ಚುನಾವಣಾ ಆಯೋಗವನ್ನು ಭೇಟಿ ಮಾಡಿದ ಬಿಜೆಪಿ ನಿಯೋಗವು ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದವು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಕಿರಣ್‌ ರಿಜಿಜು, ಪ್ರಧಾನಿಯನ್ನ ಭಯೋತ್ಪಾದಕ ಎಂದು ಕರೆಯುವುದು ಇಡೀ ದೇಶಕ್ಕೆ ಅಪಮಾನ. ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಪ್ರಧಾನಿಗಳನ್ನು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.