2026-06-08 02:44:19

BJP demands withdrawal of media ban on Vidhana Soudha | ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಆದೇಶ ಹಿಂಪಡೆಯಲು ಬಿಜೆಪಿ ಒತ್ತಾಯ | Speed News Kannada

BJP demands withdrawal of media ban on Vidhana Soudha | ವಿಧಾನಸೌಧಕ್ಕೆ ಮಾಧ್ಯಮಗಳಿಗೆ ನಿರ್ಬಂಧ ಆದೇಶ ಹಿಂಪಡೆಯಲು ಬಿಜೆಪಿ ಒತ್ತಾಯ | Speed News Kannada

ಬೆಂಗಳೂರು: ವಿಧಾನಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಆದೇಶವನ್ನು ಹಿಂಪಡೆಯುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಸರ್ಕಾರವನ್ನು ಆಗ್ರಹಪಡಿಸಿದ್ದಾರೆ.
ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ ಕಾಂಗ್ರೆಸ್‌ ಸರಕಾರ  ನಾಲಾಯಕ್ ಎಂದು ಜನರು ಮಾತನಾಡುತ್ತಿದ್ದಾರೆ. ಇದಕ್ಕೆ ಪುಷ್ಟಿ ಕೊಡುವಂತೆ ಇಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಮತ್ತೊಂದು ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಟೀಕಿಸಿದರು.
ಇಂತಹ ತೀರ್ಮಾನಗಳನ್ನು ಏಕೆ ತೆಗೆದುಕೊಳ್ಳುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಕಳೆದ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ದ್ವೇಷ ಭಾಷಣ ಸಂಬಂಧ ಕಾಯ್ದೆ ತಂದಿದ್ದರು. ಈ ಸರಕಾರದ ಒಂದೊಂದು ನಿರ್ಣಯವೂ ಪ್ರಜಾಪ್ರಭುತ್ವವನ್ನು ಅಣಕಿಸುವ ರೀತಿಯಲ್ಲಿ ಇರುತ್ತದೆ ಎಂದರು.
ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಮತ್ತೊಮ್ಮೆ ಹೇಳುವುದಾಗಿ ತಿಳಿಸಿದರು.
ಪಾಕಿಸ್ತಾನ ಜಿಂದಾಬಾದ್ ಎಂದು ಜಯಘೋಷ ಕೂಗುವುದಕ್ಕೆ ಕಡಿವಾಣ ಹಾಕಲು ಈ ಸರಕಾರಕ್ಕೆ ಸಾಧ್ಯವಾಗಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದರೂ ಪುರಾವೆಗಳಿಲ್ಲವೆಂದು ತಿಳಿಸಿದ್ದರು. ಈಗ ಸಚಿವರ ಕಚೇರಿಯಲ್ಲಿ ಕಳ್ಳತನದ ನೆಪವೊಡ್ಡಿ ಈ ರೀತಿ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ ಎಂದು ತಿಳಿಸಿದರು.
ಬಿಜೆಪಿಯ ಅನೇಕ ಶಾಸಕರೂ ಇದೇ ಆಗ್ರಹವನ್ನು ಮಾಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.