2026-06-08 03:31:28

BJP Files Complaint Against Youth Congress | ಪ್ರಧಾನಿ ಮೋದಿ ಭಾವಚಿತ್ರ ದುರ್ಬಳಕೆ ಯುವ ಕಾಂಗ್ರೆಸ್‌ ವಿರುದ್ಧ ಬಿಜೆಪಿ ದೂರು | Speed News Kannada

BJP Files Complaint Against Youth Congress | ಪ್ರಧಾನಿ ಮೋದಿ ಭಾವಚಿತ್ರ ದುರ್ಬಳಕೆ ಯುವ ಕಾಂಗ್ರೆಸ್‌ ವಿರುದ್ಧ ಬಿಜೆಪಿ ದೂರು | Speed News Kannada

ಬೆಂಗಳೂರು: ಪ್ರಧಾನಿ ಮೋದಿ ಅವರ ಭಾವಚಿತ್ರವನ್ನು ಬಳಸಿಕೊಂಡು ರಾಜ್ಯ ಯುವ ಕಾಂಗ್ರೆಸ್‌ ಸಮಿತಿ ರಾಜಕೀಯ ದಂಗೆಗೆ ಪ್ರಚೋದಿಸುತ್ತಿದೆ ಎಂದು  ಪೊಲೀಸರಿಗೆ ದೂರು ನೀಡಿದೆ. ಯುವ ಕಾಂಗ್ರೆಸ್‌ ಕಾರ್ಯಕರ್ತರು ಇದೇ 8ರಂದು ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಬಳಸಿ, ದೇಶದ ಸಂಸತ್ತಿಗೆ ಬರಲು ಧೈರ್ಯವಿಲ್ಲದೆ ಪುಕ್ಕಲ ಪ್ರಧಾನ ದೇಶವನ್ನು ಹೇಗೆ ರಕ್ಷಿಸುತ್ತಾರೆ? ಎಂಬ ಸುಳ್ಳು ಸುದ್ದಿ ಬರಹದ ಬ್ಯಾನರ್ ಅನ್ನು ಕಾನೂನುಬಾಹಿರವಾಗಿ ವಿಧಾನಸೌದದ ಮುಂದೆ ಹಾಕಿದ್ದಾರೆ. ಆ ಮೂಲಕ ದೇಶದ ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸಂಚು ರೂಪಿಸಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸಿದ್ದಾರೆ ಎಂದು ಕಬ್ಬನ್ ಪಾರ್ಕ್ ನಲ್ಲಿರುವ ಡಿಸಿಪಿ ಪೊಲೀಸ್ ಠಾಣೆಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಲಾಗಿದೆ.
ಪ್ರಧಾನಿಗಳ ಸ್ಥಾನವನ್ನು ಅಪಮಾನಿಸಿ ಸುಳ್ಳು ಸುದ್ದಿಯ ಬ್ಯಾನರ್ ಮೂಲಕ ತೇಜೋವಧೆ ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಶಾಂತಿ ಮತ್ತು ರಾಜಕೀಯ ದಂಗೆಗಳನ್ನು ಪ್ರಚೋದಿಸುತ್ತಿರುವ ಕರ್ನಾಟಕ ಪ್ರದೇಶ ಯುತ್ ಕಾಂಗ್ರೆಸ್ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಮುನಿರಾಜ್ ಗೌಡ, ಪಕ್ಷದ ಪ್ರಮುಖರು ಇದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.