2026-03-07 12:56:12

BJP Hits Back At Priyank Kharge For Demanding Resignation | ದಾಖಲೆ ನೀಡಿ ಸಚಿವರ ರಾಜೀನಾಮೆ ಕೇಳಿ: ಬಿಜೆಪಿ ಪ್ರಿಯಾಂಕ್‌ ಖರ್ಗೆ ತಿರುಗೇಟು | Speed News Kannada

BJP Hits Back At Priyank Kharge For Demanding Resignation | ದಾಖಲೆ ನೀಡಿ ಸಚಿವರ ರಾಜೀನಾಮೆ ಕೇಳಿ: ಬಿಜೆಪಿ ಪ್ರಿಯಾಂಕ್‌ ಖರ್ಗೆ ತಿರುಗೇಟು | Speed News Kannada

ಬೆಂಗಳೂರು: ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದಕ್ಕೆ ದಾಖಲೆಗಳನ್ನು ನೀಡಿ ನಂತರ ರಾಜೀನಾಮೆ ಕೇಳಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಬಿಜೆಪಿ ಯಾವುದೇ ಪುರಾವೆಗಳನ್ನು ನೀಡದೆ ವಿಧಾನಸೌಧದಲ್ಲಿ ಆಟವಾಡುತ್ತಿದೆ. ತಮ್ಮ ವಿರುದ್ಧ ಸಾಕ್ಷ್ಯಗಳನ್ನು ನೀಡುವಂತೆ ಪ್ರತಿಪಕ್ಷಗಳಿಗೆ ತಿಮ್ಮಾಪುರ ಅವರೇ ಸವಾಲು ಹಾಕಿದ್ದಾರೆ. ಒಂದೇ ಒಂದು ಪುರಾವೆ ನೀಡಿದರೂ ರಾಜೀನಾಮೆ ನೀಡಲು ಸಿದ್ಧ ಎಂದು ಅವರು ಹೇಳಿದ್ದಾರೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಆರಂಭವಾದ ದಿನದಿಂದಲೂ ಬಿಜೆಪಿ ಸದಸ್ಯರು ಈ ವಿಷಯವನ್ನು ಪ್ರಸ್ತಾಪಿಸುತ್ತಲೇ ಇದ್ದಾರೆ. ಆದರೆ, ಇದುವರೆಗೆ, ಭ್ರಷ್ಟಾಚಾರ ಎಲ್ಲಿ, ಯಾವಾಗ ಮತ್ತು ಹೇಗೆ ನಡೆಯಿತು ಎಂದು ಹೇಳಲು ಅವರಿಗೆ ಸಾಧ್ಯವಾಗಿಲ್ಲ ಎಂದು ತಿರುಗೇಟು ನೀಡಿದರು. 
ಬಿಜೆಪಿ ಮುಖಂಡರು ತಮ್ಮಲ್ಲಿರುವ ಪುರಾವೆಗಳನ್ನು ಸದನದಲ್ಲಿ ನೀಡಬಹುದು ಅಥವಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದು. ಆದರೆ, ಅವರು ಗ್ಯಾಲರಿಯಲ್ಲಿ ಆಟವಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಯಾವುದೇ ವಿಷಯ ಪ್ರಸ್ತಾಪಿಸಿದಾಗ ಸೂಕ್ತ, ಸಮರ್ಪಕ ದಾಖಲೆಗಳನ್ನು ಒದಗಿಸುತ್ತದೆ ಎಂದು ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದರು.
ಒಬ್ಬ ಅಧಿಕಾರಿ ಹಣ ನೀಡಬೇಕು ಎಂದು ಹೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ ನೀಡಬೇಕಿಲ್ಲ. ಬಿಜೆಪಿ ಆಡಳಿತದಲ್ಲಿ ನಾವು ದಾಖಲೆಗಳನ್ನು ಮುಂದಿಟ್ಟುಕೊಂಡು ಮಾತನಾಡಿದ್ದೇವೆ. ಆದ್ದರಿಂದ, ಪುರಾವೆಗಳನ್ನು ಮುಂದಿಟ್ಟು ಮಾತನಾಡಿದರೆ ನಾವು ಚರ್ಚಿಸಲು ಸಿದ್ಧ ಎಂದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.