2026-04-23 10:54:38

BJP lashes out at state government for abandoning Hindi language | ಹಿಂದಿ ಭಾಷೆ ಕೈಬಿಟ್ಟ ರಾಜ್ಯ ಸರ್ಕಾರದ ವಿರುದ್ಧ BJP ಕಿಡಿ | Speed news kannada

BJP lashes out at state government for abandoning Hindi language | ಹಿಂದಿ ಭಾಷೆ ಕೈಬಿಟ್ಟ ರಾಜ್ಯ ಸರ್ಕಾರದ ವಿರುದ್ಧ BJP ಕಿಡಿ | Speed news kannada

ಕರ್ನಾಟಕದಲ್ಲಿ SSLC ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳ ಹಿನ್ನೆಲೆ ರಾಜಕೀಯ ವಾಗ್ವಾದ ತೀವ್ರಗೊಂಡಿದೆ. ರಾಜ್ಯ ಸರ್ಕಾರದ ಹೊಸ ತೀರ್ಮಾನಗಳ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, SSLC ಪರೀಕ್ಷೆಯ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಇಳಿಕೆ ಮಾಡಲಾಗಿದೆ ಎಂದು ತಿಳಿಸಿದರು. ತೃತೀಯ ಭಾಷೆಗಳಾದ ಹಿಂದಿ ಸೇರಿದಂತೆ ಇತರೆ ಭಾಷೆಗಳ ಅಂಕಗಳನ್ನು ಕಡಿತಗೊಳಿಸಲಾಗಿದ್ದು, ಅವುಗಳಿಗೆ 100 ಅಂಕಗಳ ಪರೀಕ್ಷೆ ನಡೆಯಲಿದ್ದು, ಅಂಕಪಟ್ಟಿಯಲ್ಲಿ ಗ್ರೇಡ್ ರೂಪದಲ್ಲಿ ನಮೂದಿಸಲಾಗುತ್ತದೆ ಎಂದರು. ರಾಜ್ಯ ಸರ್ಕಾರದ ತೀರ್ಮಾನಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಸರ್ಕಾರದ ನಡೆ ಆಘಾತಕಾರಿಯಾಗಿದೆ ಎಂದು ಹೇಳಿದ್ದಾರೆ. ವಿಶೇಷವಾಗಿ SSLC ಪರೀಕ್ಷೆಗಳು ನಡೆಯುತ್ತಿರುವ ಸಮಯದಲ್ಲೇ ಇಂತಹ ಬದಲಾವಣೆ ಮಾಡಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟುಮಾಡಿದೆ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಹಲವು ದಶಕಗಳಿಂದ ಜಾರಿಯಲ್ಲಿರುವ ತ್ರಿಭಾಷಾ ನೀತಿಯನ್ನು ಯಾವುದೇ ಪೂರ್ವ ಚರ್ಚೆಯಿಲ್ಲದೆ ಬದಲಾಯಿಸುವುದು ಸರಿಯಿಲ್ಲ. ಶಿಕ್ಷಣ ತಜ್ಞರು, ಭಾಷಾ ತಜ್ಞರು ಹಾಗೂ ಸಾರ್ವಜನಿಕರೊಂದಿಗೆ ಚರ್ಚೆ ನಡೆಸದೇ ತೆಗೆದುಕೊಂಡ ಈ ತೀರ್ಮಾನ ವಿವೇಕ ರಹಿತವಾಗಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.ಈ ವಿಷಯದಲ್ಲಿ ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಚರ್ಚೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ತೀರ್ಮಾನ ಹೇಗೆ ಪರಿಣಾಮ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.