2026-03-07 02:40:53

BJP Leader K. Annamalai Resigns | ಚುನಾವಣಾ ಉಸ್ತುವಾರಿ ಸ್ಥಾನಕ್ಕೂ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ ಕೆ.ಅಣ್ಣಾಮಲೈ; ಕುತೂಹಲ ಮೂಡಿಸಿದ ನಡೆ | Speed News Kannada

BJP Leader K. Annamalai Resigns | ಚುನಾವಣಾ ಉಸ್ತುವಾರಿ ಸ್ಥಾನಕ್ಕೂ ರಾಜೀನಾಮೆ ನೀಡಿದ ಬಿಜೆಪಿ ಮುಖಂಡ ಕೆ.ಅಣ್ಣಾಮಲೈ; ಕುತೂಹಲ ಮೂಡಿಸಿದ ನಡೆ | Speed News Kannada

ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಮಾಜಿ ಐಪಿಎಸ್‌ ಆಧಿಕಾರಿ ಕೆ. ಅಣ್ಣಾಮಲೈ ಇದೀಗ ಉಸ್ತುವಾರಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ತಮಿಳುನಾಡಿನ 6 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ಅಣ್ಣಾಮಲೈ ಅವರಿಗೆ ವಹಿಸಲಾಗಿತ್ತು. ಇದೀಗ ಈ ಜವಬ್ದಾರಿಗಳಿಂದಲೂ ಹೊರಬಂದು ಅಚ್ಚರಿ ಮೂಡಿಸಿದ್ದಾರೆ. 
ಇವರಿಗೆ ಸಿಂಗನಲ್ಲೂರು, ಮಧುರೆ ದಕ್ಷಿಣ, ವಿರುಂಗಂಪಾಕಂ, ಕಾರೈಕುಡಿ, ಶ್ರೀವೈಕಂಠಮ್, ಪದ್ಮನಾಭಪುರಂ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿತ್ತು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ತಂದೆಯ ಅನಾರೋಗ್ಯದ ಕಾರಣ ನೀಡಿ ರಾಜೀನಾಮೆ ನೀಡಿದ್ದಾರೆ. ತಂದೆಗೆ ಅನಾರೋಗ್ಯವಿದೆ. ಅವರ ಆರೈಕೆ ನನಗೆ ಮುಖ್ಯವಾಗಿದ್ದು, ಕೊಯಂಬತ್ತೂರಿನಲ್ಲಿ ಉಳಿಯಬೇಕಾಗಿದೆ. 6 ಕ್ಷೇತ್ರಗಳಿಗೆ ಪ್ರವಾಸ ಮಾಡುವುದು ಅಸಾಧ್ಯ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಅವರ ಮೇಲೆ ಅಪಾರ ವಿಶ್ವಾಸ ಇಟ್ಟು ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದ ಅವರು ಹೊಸ ಪಕ್ಷ ಕಟ್ಟುವ ಸಾಧ್ಯತೆಗಳನ್ನು ತಳ್ಳಿ ಹಾಕಿದ್ದಾರೆ. ನನಗೆ ಯಾವುದೇ  ರಾಜಕೀಯ ಹಿನ್ನೆಲೆ ಇಲ್ಲ. ಕೃಷಿ ಕುಟುಂಬದಿಂದ ಬಂದ ನನಗೆ ಆ ಸಾಮರ್ಥ್ಯವೂ ಇಲ್ಲ ಎಂದು ಉತ್ತರಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.