2026-03-07 12:57:45

BJP leader Ravikumar | ಆರ್‌ ಎಸ್‌ ಎಸ್ ಕಂಡರೆ ಪ್ರಿಯಾಂಕ್‌ ಖರ್ಗೆಗೆ ಹೊಟ್ಟೆ ಉರಿ ಏಕೆ ಬಿಜೆಪಿ ಮುಖಂಡ ರವಿಕುಮಾರ್‌ | Speed News Kannada

BJP leader Ravikumar | ಆರ್‌ ಎಸ್‌ ಎಸ್ ಕಂಡರೆ ಪ್ರಿಯಾಂಕ್‌ ಖರ್ಗೆಗೆ ಹೊಟ್ಟೆ ಉರಿ ಏಕೆ ಬಿಜೆಪಿ ಮುಖಂಡ ರವಿಕುಮಾರ್‌ | Speed News Kannada

ಬೆಂಗಳೂರು: ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ ಎಸ್‌ ಎಸ್‌ ಕುರಿತು ದ್ವೇಷ, ಹೊಟ್ಟೆ ಉರಿಯಿಂದ ಮಾತನಾಡುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಟೀಕಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಅನ್ನು ದೆವ್ವ ಎಂದು ಕರೆದಿದ್ದಾರೆ. ಬಿಜೆಪಿಯ ಹಿಂದೆ ಇರುವ ಆರೆಸ್ಸೆಸ್ ಅನ್ನು ನೆರಳಿಗೆ ಹೋಲಿಸಿದ್ದಾರೆ ಎಂದರು.
ಆರೆಸ್ಸೆಸ್ ಸ್ಥಾಪನೆಯಾಗಿ ನೂರು ವರ್ಷವಾಗಿದೆ. ಇಂದು ವಿಶ್ವದಲ್ಲಿ ನಂಬರ್ ಒನ್ ದೇಶಭಕ್ತ ಸಂಘಟನೆಯಾಗಿದೆ. ಆರೆಸ್ಸೆಸ್‍ನಿಂದ ಹೊರಬಂದವರು ದೇಶಸೇವೆ; ಸಮಾಜಸೇವೆ ಮಾಡುತ್ತಾರೆ. ಅದನ್ನು ನೋಡಿ ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ದೇಶದ ಅಭಿವೃದ್ಧಿಗೆ ಆರೆಸ್ಸೆಸ್ ಬಹಳ ದೊಡ್ಡ ಕೊಡುಗೆ ನೀಡುತ್ತಿದೆ ಎಂದು ತಿಳಿಸಿದರು.
ಕಾಶ್ಮೀರ ಈ ದೇಶದಲ್ಲಿ ಉಳಿಯಲು, ಸಂಸ್ಕೃತಿ ಉಳಿವಿಗೆ, ದೇಶದ ಶಿಕ್ಷಣದ ಪರಿಸ್ಥಿತಿ ಸುಧಾರಣೆಗೆ ಶ್ರೀರಾಮ ದೇಗುಲ ನಿರ್ಮಾಣ, ದೇಶದ ಏಕತೆ, ಅಖಂಡತೆ ಕಾಪಾಡುವ ವಿಚಾರ- ಹೀಗೆ ಅನೇಕ ವಿಷಯಗಳಲ್ಲಿ ಆರೆಸ್ಸೆಸ್ಸಿನ ಕೊಡುಗೆಯನ್ನು ನೀವು ಮನಗಾಣಲು ಸಾಧ್ಯವಿಲ್ಲ ಎಂದು ನುಡಿದರು. 
ಪ್ರಿಯಾಂಕ್ ಖರ್ಗೆ ಮತ್ತು ಅವರ ತಂದೆ ಆರು ತಿಂಗಳು ಆರೆಸ್ಸೆಸ್ ಕುರಿತು ಅಧ್ಯಯನ ಮಾಡಲು ಬರಬೇಕು. ಆಗಲಾದರೂ ಆರೆಸ್ಸೆಸ್ ಬಗ್ಗೆ ಗೊತ್ತಾಗಬಹುದು ಎಂದು ವ್ಯಂಗ್ಯವಾಡಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.