2026-07-23 12:13:51

BJP leader Vijayendra | ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಬಿಜೆಪಿ ನಾಯಕ ವಿಜಯೇಂದ್ರ | Speed News Kannada

BJP leader Vijayendra | ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಬಿಜೆಪಿ ನಾಯಕ ವಿಜಯೇಂದ್ರ | Speed News Kannada

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುವ ಸಮಯ ಬಂದಿದೆ. ಎಐಸಿಸಿ ಅಧ್ಯಕ್ಷ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ಇದ್ನನೇ ಹೇಳಿದ್ದಾರೆ ಒಟ್ಟಾರೆ ದಿನಾಂಕ ನಿಗದಿಯಾಗಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಇಂದು ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸಿಎಂ ಡಿಸಿಎಂ ಬಣಗಳು ಕುರ್ಚಿಗಾಗಿ ದಿನವೂ ಕಿತ್ತಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾಂಗ್ ಮೊದಲು ದೆಹಲಿಗೆ ಹೋದರೆ, ನಂತರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಾವರ ಬಣವೂ ದೆಹಲಿ ಯಾತ್ರೆ ಮಾಡುತ್ತಿದೆ. ಇವರಿಬ್ಬರ ಜಗಳದಲ್ಲಿ ತಮಗೇನಾದರೂ ಲಾಭ ಆಗಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಅವರೂ ಸಹ ಟವೆಲ್ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಮಾನವೀಯತೆ ಎನ್ನುವುದೇ ಇಲ್ಲ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಹಾಗಾಗಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲುತ್ತದೆ ಎಂದು ಆ ಪಕ್ಷದ ಮುಖಂಡರೇ ಹೇಳುತ್ತಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ವಿಜಯೇಂದ್ರ ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಅವರು ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರನ್ನು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.  ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪಸಿಂಹ, ಮೈಸೂರು ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ, ಮೈಸೂರು ಗ್ರಾಮೀಣ ಜಿಲ್ಲಾಧ್ಯಕ್ಷ ಕೆ.ಎನ್.ಸುಬ್ಬಣ್ಣ, ಮಾಜಿ ಶಾಸಕ ನಿರಂಜನ್ ಕುಮಾರ್ ಉಪಸ್ಥಿತರಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.