2026-06-25 02:06:58

BJP leaders son dies in Hubballi | ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಸಾವು ಕೇಸ್ ಅಪ್ರಾಪ್ತ ಬಾಲಕನ ವಿರುದ್ಧ ಕೇಸ್ ದಾಖಲು | Speed News Kannada

BJP leaders son dies in Hubballi | ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಸಾವು ಕೇಸ್ ಅಪ್ರಾಪ್ತ ಬಾಲಕನ ವಿರುದ್ಧ ಕೇಸ್ ದಾಖಲು | Speed News Kannada

ಹುಬ್ಬಳ್ಳಿ : ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಮುಖಂಡನ ಪುತ್ರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿಯ ವಿದ್ಯಾ ನಗರ ಪೊಲೀಸ್ ಠಾಣೆಯಲ್ಲಿ 17 ವರ್ಷದ ಅಪ್ರಾಪ್ತ ಬಾಲಕನ ವಿರುದ್ಧ ಇದೀಗ ಕೇಸ್ ದಾಖಲು ಆಗಿದೆ ಪ್ರಕರಣ ದಾಖಲಾಗಿದೆ. ಸದ್ಯ ಅಪರಾಪ್ತ ಬಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ನಿನ್ನೆ ಸಂಜೆ ವಾಹನಗಳ ಕ್ರಶ್ ರಿಲೀಸ್ ಮಾಡುವಾಗ ಅಪಘಾತ ಸಂಭವಿಸಿದೆ ಅಪಘಾತದಲ್ಲಿ ಮೃತಪಟ್ಟಿದ್ದ ಸ್ಕೂಟಿಗೆ ಆಡಿ ಕಾರು ಡಿಕ್ಕಿಯಾಗಿ ನಮಿಷ ಸಾವನಪ್ಪಿದ್ದ. ಇದೀಗ ಮತ ಬಾಲಕನ ತಂದೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ನಮಿಷ ಜೊತೆಗೆ ಇದ್ದ ಮತ್ತೊಬ್ಬ ಪ್ರಾಪ್ತ ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಘಟನೆ ಹಿನ್ನೆಲೆ?
ಸ್ಟಂಟ್ ಮತ್ತು ಕ್ಯಾಶ್ ರೀಲ್ಸ್ ಮಾಡುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ(15) ಮೃತಟ್ಟಿದ್ದಾನೆ. ಹುಬ್ಬಳ್ಳಿಯ ಲಕ್ಷ್ಮಿ ನಗರದ ನಿವಾಸಿಯಾಗಿರುವ ನಮೀಷ ಸಂಗಳದ, ಮೈಸೂರಿನಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಆದ್ರೆ, ಯುಗಾದಿ ಹಬ್ಬಕ್ಕೆಂದು ಹುಬ್ಬಳ್ಳಿಗೆ ಬಂದಿದ್ದು, ಈ ವೇಳೆ ಅಪಯಕಾರಿ ರೀಲ್ಸ್ ಮಾಡಲು ಹೋಗಿ ದುರಂತ ಸಾವು ಕಂಡಿದ್ದಾನೆ.
ಯುಗಾದಿ ಹಬ್ಬಕ್ಕೆಂದು ಊರಿಗೆ ಬಂದಿದ್ದ ನಮೀಷ ಸಂಗಳದ ರೀಲ್ಸ್ ಮಾಡಲೆಂದು ಗೆಳೆಯರೊಂದಿಗೆ ಸೇಜವಾಡಕ್ಕರ್ ಪ್ಲಾಟ್‌ಗೆ ತೆರಳಿದ್ದರು. ವೇಗವಾಗಿ ವಾಹನ ಚಲಾಯಿಸುವ ರೀಲ್ಸ್ ಮಾಡಲು ಪ್ಲಾನ್ ಮಾಡಿದ್ದರು. ಅದರಂತೆ ಓರ್ವ ಅಪ್ರಾಪ್ತ ಬಾಲಕ ಆಡಿ ಕಾರು ಓಡಿಸುತ್ತಿದ್ದರೆ, ಇನ್ನೊಂದೆಡೆ ಮೃತ ನಮೀಷ ಸಂಗಳದ ಬೈಕ್ ನಲ್ಲಿದ್ದು, ಸ್ಟಂಟ್ ಮತ್ತು ಕ್ರಾಶ್ ರೀಲ್ಸ್ ಮಾಡುತ್ತಿದ್ದಾಗ ಕಾರು ವೇಗವಾಗಿ ಬಂದು ನಿಯಂತ್ರಣ ತಪ್ಪಿ ನಮೀಷ ಸಂಗಳದ ಇದ್ದ ಬೈಕ್‌ಗೆ ಗುದ್ದಿದೆ ಪರಿಣಾಮ ಬಿಜೆಪಿ ಮುಖಂಡನ ಪುತ್ರ ನಮೀಷ ಸಂಗಳದ ಸಾವನ್ನಪ್ಪಿದ್ದಾನೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಮಾಡಿರುವ ಅಪ್ತಾಪ್ತ ಬಾಲಕನನ್ನು ವಿಚಾರಣೆಗೊಳಪಡಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.