2026-03-07 04:59:18

BJP MLA Dr Chandru Lamani falls into Lokayukta trap | ಲಂಚ ಲೋಕಾಯುಕ್ತ ಬಲೆಗೆ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ | Speed News Kannada

BJP MLA Dr Chandru Lamani falls into Lokayukta trap | ಲಂಚ ಲೋಕಾಯುಕ್ತ ಬಲೆಗೆ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ | Speed News Kannada

ಗದಗ: ಗುತ್ತಿಗೆದಾರರಿಂದ ಲಂಚ ಪಡೆಯುವಾಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸಣ್ಣ ನೀರಾವರಿ ಇಲಾಖೆಯ ಗುತ್ತಿಗೆ ನೀಡಲು 11 ಲಕ್ಷ ರೂ. ಕಮಿಷನ್ ಕೇಳಿದ್ದರು. ಗುತ್ತಿಗೆದಾರ ವಿಜಯ್ ಪೂಜಾರಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ರೂ.5 ಲಕ್ಷ ಹಣ ಪಡೆಯುವಾಗ ಲಮಾಣಿ ಸಿಕ್ಕಿ ಬಿದ್ದಿದ್ದಾರೆ.
ಶಾಸಕ  ಲಮಾಣಿ ಜತೆ ಪಿಎಗಳಾದ ಮಂಜುನಾಥ್ ಮತ್ತು ಗುರು ಅವರನ್ನೂ ಬಂಧಿಸಲಾಗಿದೆ. ಲೋಕಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಚಂದ್ರು ಲಮಾಣಿ ಅವರು ತಮ್ಮದೇ ಒಡೆತನದ ಬಾಲಾಜಿ ಆಸ್ಪತ್ರೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.