2026-06-08 01:28:46

ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಬೆಂಗಳೂರಿಗೆ ಆಗಮನ: ಅವರ ಕಾರ್ಯಕ್ರಮಗಳೇನು? |Speed News Kannada

 ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಬೆಂಗಳೂರಿಗೆ ಆಗಮನ: ಅವರ ಕಾರ್ಯಕ್ರಮಗಳೇನು? |Speed News Kannada

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ , ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಮುಂಜಾನೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಮನೆಯಲ್ಲಿ ಉಪಾಹಾರ ಸೇವಿಸಿ ನಂತರ ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಹತ್ತು ಗಂಟೆಗೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಆಗಮಿಸಿ ರಾಜ್ಯದ ಬಿಜೆಪಿ ಸಂಸದರು, ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದ ರಾಜಕೀಯ ಸ್ಥಿತಿಗತಿಯ ಅವಲೋಕನ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಂತರ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ನಂತರ ಬೆಂಗಳೂರು ಉತ್ತರ ಜಿಲ್ಲೆಯಲ್ಲಿ ನಡೆಯಲಿರುವ ಪ್ರಶಿಕ್ಷಣ ವರ್ಗದಲ್ಲಿ  ಭಾಗವಹಿಸಲಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.