2026-03-07 04:59:51

BJP Ready To Move Resolution To Expel Rahul Gandhi from Lok Sabha | ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ವಜಾಗೊಳಿಸಲು ನಿರ್ಣಯ ಮಂಡನೆಗೆ ಬಿಜೆಪಿ ಸಿದ್ದತೆ | Speed News Kannada

BJP Ready To Move Resolution To Expel Rahul Gandhi from Lok Sabha | ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ವಜಾಗೊಳಿಸಲು ನಿರ್ಣಯ ಮಂಡನೆಗೆ ಬಿಜೆಪಿ ಸಿದ್ದತೆ | Speed News Kannada

ನವದೆಹಲಿ: ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುತ್ತಾ  ಬಿಜೆಪಿ ನೇತೃತ್ವದ ಎನ್‌ ಡಿಎ ಸರ್ಕಾರದ ವಿರುದ್ಧ ಸರಣಿ ಆರೋಪ ಮಾಡಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವವನ್ನು ವಜಾಗೊಳಿಸುವಂತೆ ಬಿಜೆಪಿ ನೋಟಿಸ್ ಸಲ್ಲಿಸಲು ಉದ್ದೇಶಿಸಿದೆ.
ನಿನ್ನೆ ಲೋಕಸಭೆಯಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಕಾಂಗ್ರೆಸ್‌ ಸಂಸದರೂ ಆಗಿರುವ ರಾಹುಲ್‌ ಗಾಂಧಿ ಕಟುವಾಗಿ ಟೀಕಿಸಿದ್ದರು. ಹಾಗೆಯೇ ಭಾರತ ಅಮೆರಿಕ ವ್ಯಾಪಾರ ಒಪ್ಪಂದ ಪ್ರಸ್ತಾಪಿಸಿ ಭಾರತವನ್ನು ಮಾರಾಟ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದರು. ರಾಹುಲ್ ಗಾಂಧಿ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯಕ್ಕೆ ಬಿಜೆಪಿ ಸಂಸದರು ನಿರ್ಧರಿಸಿದ್ದಾರೆ. ನಂತರದ ಬೆಳವಣಿಗೆಗಳಲ್ಲಿ ಬಿಜೆಪಿ ಈ ನಿಲುವು ತೆಗೆದುಕೊಂಡಿದೆ.
ರಾಹುಲ್ ಗಾಂಧಿ ಅವರು ಸರ್ಕಾರದ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಅವರ ವಿರುದ್ಧ ಸಂಪೂರ್ಣ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ತೀರ್ಮಾನಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.