2026-06-08 02:24:32

BJP workers show black clothes to Rahul | ಯುವ ಕಾಂಗ್ರೆಸ್‌ ಪ್ರತಿಭಟನೆಗೆ ಪರ್ಯಾಯ ರಾಹುಲ್‌ಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು | Speed News Kannada

BJP workers show black clothes to Rahul | ಯುವ ಕಾಂಗ್ರೆಸ್‌ ಪ್ರತಿಭಟನೆಗೆ ಪರ್ಯಾಯ ರಾಹುಲ್‌ಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು | Speed News Kannada

ಮುಂಬೈ: ಯುವ ಕಾಂಗ್ರೆಸ್‌ ಕಾರ್ಯಕರ್ತರ ಗುಂಪೊಂದು ಎ.ಐ ಶೃಂಗಸಭೆಯ ‘ಎಕ್ಸ್‌ಪೋʼದಲ್ಲಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆಗೆ ಪ್ರತೀಕಾರವಾಗಿ ಬಿಜೆಪಿ ಕಾರ್ಯಕರ್ತರು ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ.
ರಾಹುಲ್ ಗಾಂಧಿ ಅವರು ಮಾನನಷ್ಟ ಪ್ರಕರಣ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಾಂಡಿಗೆ ರಸ್ತೆ ಮೂಲಕ ಪ್ರಯಾಣಿಸುತ್ತಿದ್ದರು. ಮುಲುಂಡ್ ಟೋಲ್ ಪ್ಲಾಜಾ ಬಳಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿ ರಾಹುಲ್‌ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳನ್ನು ರಾಹುಲ್ ಗಾಂಧಿ ನಿರಂತರವಾಗಿ ವಿರೋಧಿಸುತ್ತಾ ಬಂದಿದ್ದು, ದೇಶದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಎ.ಐ ಶೃಂಗಸಭೆಯಲ್ಲಿ ದೇಶದ ಪ್ರತಿಷ್ಠೆಗೆ ಧಕ್ಕೆ ತರುವ ರೀತಿಯಲ್ಲಿ ಘೋಷಣೆಗಳನ್ನು ಕೂಗಿದ್ದಾರೆ. ಅದಕ್ಕೆ ಪ್ರತೀಕಾರವಾಗಿ  ರಾಹುಲ್ ಗಾಂಧಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ.
ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಸಚಿನ್ ಸಾವಂತ್, ಬಿಜೆಪಿ ನಾಯಕರು ಪ್ರತಿಭಟನೆ ನಡೆಸುವ ಮೂಲಕ ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಮಾತನಾಡುವ ಬದಲು ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.