2026-03-07 05:06:47

BJPs victory in Davangere South constituency is assured | ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ ಬಿ ವೈ ವಿಜಯೇಂದ್ರ | Speed News Kannada

BJPs victory in Davangere South constituency is assured | ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ  ಪಣ ಬಿ ವೈ ವಿಜಯೇಂದ್ರ | Speed News Kannada

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂಬ ಪಣ ತೊಟ್ಟಿದ್ದೇವೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪ್ರಯತ್ನ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಏನೇ ವ್ಯತ್ಯಾಸಗಳಿದ್ದರೂ ಅದನ್ನು ಸರಿಪಡಿಸುವ ಶಕ್ತಿ ನಮ್ಮೆಲ್ಲರಲ್ಲೂ ಇದೆ. ಹಾಗಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ ವಾಲ್ ಅವರೂ ಬಂದಿದ್ದಾರೆ. ಎಲ್ಲರೂ ಕುಳಿತು ಸಮಸ್ಯೆ ಬಗೆಹರಿಸುತ್ತೇವೆ. ಇದನ್ನು ಮುಂದುವರೆಯಲು ಬಿಡುವುದಿಲ್ಲ ಎಂದು ತಿಳಿಸಿದರು.
ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದ ಅವರು, ಅಭ್ಯರ್ಥಿ ಆಕಾಂಕ್ಷಿಗಳನ್ನು ಇವತ್ತು ಕೂಡ ಭೇಟಿ ಮಾಡಿದ್ದೇವೆ. ಅವರ ವಿಚಾರಗಳನ್ನು ತಿಳಿದುಕೊಂಡಿದ್ದೇವೆ. ಇವತ್ತು ಬಂದಿರುವ ಉದ್ದೇಶವೇ ಅದು. ಸಣ್ಣಪುಟ್ಟ ಸಮಸ್ಯೆಗಳನ್ನು ಸರಿಪಡಿಸಲಿದ್ದೇವೆ. 8-10 ಜನ ಆಕಾಂಕ್ಷಿಗಳಿದ್ದಾರೆ. ನಾಲ್ಕೈದು ಜನರನ್ನು ಭೇಟಿ ಮಾಡಿದ್ದೇವೆ. ಮಾಜಿ  ಸಂಸದ ಸಿದ್ದೇಶ್ವರ್ ಅವರನ್ನೂ ಭೇಟಿ ಮಾಡುತ್ತೇವೆ ಎಂದು ಹೇಳಿದರು. 
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಒಂದು ವಾರದಿಂದ ಸಂಘಟನೆ ಕೆಲಸ ನಡೆಯುತ್ತಿದೆ. ದಾವಣಗೆರೆ ಜಿಲ್ಲೆ ಮತ್ತು ಅಕ್ಕಪಕ್ಕದ ಜಿಲ್ಲೆಯ 150ಕ್ಕೂ ಹೆಚ್ಚು ಕಾರ್ಯಕರ್ತರು ಬಂದು ‘ವಿಸ್ತಾರಕ್ ಯೋಜನೆ’ ನಡೆಸುತ್ತಿದ್ದಾರೆ. ಪ್ರತಿ ಬೂತ್‍ನಲ್ಲಿ ಒಂದು ವಾರ ಇದ್ದು, ಬೂತ್ ನಲ್ಲಿರುವ ವಿಚಾರಗಳನ್ನು ಅರ್ಥ ಮಾಡಿಕೊಳ್ಳುವುದು, ಕಾರ್ಯಕರ್ತರಿಗೆ ಧೈರ್ಯ ತುಂಬುವುದು, ಸಂಘಟನಾತ್ಮಕವಾಗಿ ಏನೇನು ಕೆಲಸ ಮಾಡಬೇಕೋ ಅವೆಲ್ಲವನ್ನೂ ಮಾಡಿದ್ದಾರೆ. ಎಲ್ಲವೂ ಸರಿಯಾಗುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ ಕಾರ್ಯಕರ್ತರಿಗೆ ರಣೋತ್ಸಾಹ ಇದೆ. ಆದರೆ, ಮುಖಂಡರಿಗೆ ಸ್ವಲ್ಪ ಗೊಂದಲ ಇರುವುದು ಸತ್ಯ. ಇದೆಲ್ಲವನ್ನೂ ಸರಿಪಡಿಸುವ ಜವಾಬ್ದಾರಿ ಅಧ್ಯಕ್ಷನಾಗಿ ನನ್ನ ಮೇಲಿದೆ. ಹಾಗಾಗಿ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಬಂದಿದ್ದೇವೆ ಎಂದು ನುಡಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.