2026-06-08 07:43:10

blast in crackers factory, 21 died, 60 injured| ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ: 21 ಸಾವು, 61 ಮಂದಿಗೆ ಗಾಯ| Speed News Kannada

blast in crackers factory, 21 died, 60 injured| ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ: 21 ಸಾವು, 61 ಮಂದಿಗೆ ಗಾಯ| Speed News Kannada

ಬೀಜಿಂಗ್: ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದ ಪಟಾಕಿ  ತಯಾರಿಸುವ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 21 ಮಂದಿ ಮೃತಪಟ್ಟಿದ್ದು, 61ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗುವಾಂಡು ಪಟ್ಟಣದಲ್ಲಿರುವ ಲಿಯುಯಾಂಗ್ ಹುವಾಶೆಂಗ್ ಪಟಾಕಿ ಕಾರ್ಖಾನೆಯಲ್ಲಿ ಸೋಮವಾರ ಸಂಜೆ 5 ಗಂಟೆ ವೇಳೆಗೆ ಈ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಕಟ್ಟಡ ನೆಲಸಮವಾಗಿದ್ದು, ಸುತ್ತಮುತ್ತಲಿನ ಪ್ರದೇಶದ ಕಟ್ಟಡಗಳಿಗೂ ಹಾನಿ ಉಂಟಾಗಿದೆ. ಇದರಿಂದ ಆ ಪ್ರದೇಶದಲ್ಲಿ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ  ಅಗ್ನಿಶಾಮಕ ದಳ ಮತ್ತು ತುರ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿದವು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಲಾಗುತ್ತಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇತ್ತೀಚೆಗಷ್ಟೇ ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಮಂದಿ ಬಲಿಯಾಗಿದ್ದರು.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.