2026-06-08 01:33:10

blast near amritsar contonment area; anxiety created| ಅಮೃತಸರದ ಸೇನಾ ಕಂಟೋನ್ಮೆಂಟ್ ಬಳಿ ಸ್ಫೋಟ: ಆತಂಕ ಮೂಡಿಸಿದ ಘಟನೆ| Speed News Kannada

blast near amritsar contonment area; anxiety created| ಅಮೃತಸರದ ಸೇನಾ ಕಂಟೋನ್ಮೆಂಟ್ ಬಳಿ ಸ್ಫೋಟ: ಆತಂಕ ಮೂಡಿಸಿದ ಘಟನೆ| Speed News Kannada

ಪಂಜಾಬ್: ಜಲಂಧರ್‌ನಲ್ಲಿ ಸಂಭವಿಸಿದ ಸ್ಫೋಟದ ಬೆನ್ನಲ್ಲೇ ಅಮೃತಸರದ ಖಾಸಾ ಪ್ರದೇಶದಲ್ಲಿರುವ ಸೇನಾ ಕಂಟೋನ್ಮೆಂಟ್ ಹತ್ತಿರ ಮತ್ತೊಂದು ಸ್ಫೋಟ ಸಂಭವಿಸಿದ್ದು ಆತಂಕ ಮೂಡಿಸಿದೆ.

ಈ ಸ್ಪೋಟದಲ್ಲಿ ಯಾರಿಗೂ ಹಾನಿ ಉಂಟಾಗಿಲ್ಲ. ರಾತ್ರಿ 11 ಗಂಟೆ ವೇಳೆಗೆ ಖಾಸಾ ರಸ್ತೆಯಲ್ಲಿ ಭಾರಿ ಶಬ್ದ ಕೇಳಿಬಂದಿದೆ. ಕೂಡಲೇ ನಮ್ಮ ತಂಡ ಸ್ಥಳಕ್ಕೆ ಧಾವಿಸಿತುದೆ. ಪ್ರಾಥಮಿಕ ತನಿಖೆಯ ಪ್ರಕಾರ, ಯಾರೋ ಕಿಡಿಗೇಡಿಗಳು ಗೋಡೆಯತ್ತ ವಸ್ತುವೊಂದನ್ನು ಎಸೆದ ಪರಿಣಾಮ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ವಿಧಿವಿಜ್ಞಾನ ತಂಡ ಮತ್ತು ಬಾಂಬ್ ಪತ್ತೆ ದಳ ಭೇಟಿ ನೀಡಿ ಮಾದರಿಗಳನ್ನು ಸಂಗ್ರಹಿಸಿವೆ. ತನಿಖೆ ಮುಂದುವರಿದಿದೆ. ಸೇನಾ ಅಧಿಕಾರಿಗಳ ತಂಡವೂ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ.

ಮಂಗಳವಾರ ರಾತ್ರಿ 8 ಗಂಟೆಗೆ ಜಲಂಧರ್‌ನಲ್ಲಿರುವ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಪಂಜಾಬ್ ಫ್ರಾಂಟಿಯರ್ ಪ್ರಧಾನ ಕಚೇರಿ ಹೊರಗೆ ಸ್ಫೋಟ ಸಂಭವಿಸಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ.

ಜಲಂಧರ್‌ನ ಬಿಎಸ್‌ಎಫ್ ಚೌಕ್ ಬಳಿ ನಿಲ್ಲಿಸಿದ್ದ ಸ್ಕೂಟರ್‌ವೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಪೊಲೀಸ್‌ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ ಇಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ವಾಹನ ಸವಾರರಿಗೆ ಯಾವುದೇ ಗಾಯಗಳಾಗಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.