2026-04-24 01:43:24

Body found in freezer of biryani shop | ಲಕ್ನೋನಗರದ ಬಿರಿಯಾನಿ ಅಂಗಡಿಯೊಂದರ ಫ್ರೀಜರ್‌ನಲ್ಲಿ ಶವ ಪತ್ತೆ | Speed News Kannada

Body found in freezer of biryani shop | ಲಕ್ನೋನಗರದ ಬಿರಿಯಾನಿ ಅಂಗಡಿಯೊಂದರ ಫ್ರೀಜರ್‌ನಲ್ಲಿ ಶವ ಪತ್ತೆ | Speed News Kannada

ಲಕ್ನೋ : ಉತ್ತರ ಪ್ರದೇಶದ ಲಕ್ಕೆ ನಗರದಲ್ಲಿ ಬಿರಿಯಾನಿ ಅಂಗಡಿಯ ಫ್ರೀಜರ್‌ನಲ್ಲಿ 35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿರುವ ಅಂಗಡಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಮೃತರನ್ನು ವಿಜಯ್ ಪಾಲ್ ಎಂದು ಗುರುತಿಸಲಾಗಿದ್ದು, ಅವರು ಬಿಕೆಟಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಶನ್‌ಪುರ್ ಮಾಜ್ರಾ ನಿವಾಸಿಯಾಗಿದ್ದರು.
ಅಂಗಡಿ ಮಾಲೀಕರಾದ ಶನಿ ರಾವತ್ ಅವರ ತಂದೆ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ಅಂಗಡಿ ಕಳೆದ ನಾಲ್ಕು ದಿನಗಳಿಂದ ಮುಚ್ಚಲಾಗಿತ್ತು. ಭಾನುವಾರ ಬೆಳಗ್ಗೆ ಅಂಗಡಿಯನ್ನು ಮರು ತೆರೆಯಲು ಬಂದಾಗ ಫ್ರೀಜರ್ ಒಳಗೆ ಶವ ಕಂಡು ರಾವತ್ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ವಿಜಯ್ ಪಾಲ್ ದಿನಗೂಲಿ ಕಾರ್ಮಿಕರಾಗಿದ್ದು, ಐದು ವರ್ಷಗಳ ಹಿಂದೆ ಪತ್ನಿಯಿಂದ ಬೇರ್ಪಟ್ಟ ನಂತರ ಒಂಟಿಯಾಗಿ ವಾಸಿಸುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮದ್ಯಪಾನದ ಚಟವೂ ಇದ್ದುದಾಗಿ ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಎಡಿಸಿಪಿ ರಿಷಭ್ ರನ್ಸಾಲ್ ತಿಳಿಸಿದ್ದಾರೆ. ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.