2026-06-25 04:03:50

Bomb threat to Bangalore City Civil Court | ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್ ಗೆ ಬಾಂಬ್ ಬೆದರಿಕೆ ಪೊಲೀಸರಿಂದ ಪರಿಶೀಲನೆ | Speed News Kannada

Bomb threat to Bangalore City Civil Court | ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್ ಗೆ ಬಾಂಬ್ ಬೆದರಿಕೆ ಪೊಲೀಸರಿಂದ ಪರಿಶೀಲನೆ | Speed News Kannada

ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ. ಈ ವಿಷಯವನ್ನು ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಪೊಲೀಸರು ಪರಿಶೀಲನೆ ನಡೆಸಿದರು.
ಬೆಂಗಳೂರಿನ ಹೃದಯ ಭಾಗದ ಮೈಸೂರು ಬ್ಯಾಂಕ್ ಸರ್ಕಲ್ ಬಳಿಯಲ್ಲಿನ ಸಿಟಿ ಸಿವಿಲ್ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯನ್ನು ಹಾಕಲಾಗಿದೆ.
ತಮಿಳು ಭಾಷೆಯಲ್ಲಿ ಇ-ಮೇಲ್ ನಲ್ಲಿ ಬಾಂಬ್ ಬೆದರಿಕೆಯನ್ನು ಹಾಕಿರುವುದಾಗಿ ಹೇಳಲಾಗುತ್ತಿದೆ.
ಈ ವಿಷಯವನ್ನು ಪೊಲೀಸರಿಗೆ ಕೋರ್ಟ್ ಸಿಬ್ಬಂದಿ ತಿಳಿಸಿದ್ದರು. ಹೀಗಾಗಿ ಸ್ಥಳಕ್ಕೆ ಹಲಸೂರು ಗೇಟ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೋರ್ಟ್ ನಲ್ಲಿ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ತಪಾಸಣೆ ನಡೆಸುತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.